ರೈತ ಸಂಘಟನೆಯಿಂದ ಅಭ್ಯರ್ಥಿಗಳು ಜಿಪಂ, ತಾಪಂಗೆ ಸ್ಪರ್ಧೆ

KannadaprabhaNewsNetwork |  
Published : Jul 16, 2026, 02:30 AM IST
ಸೋನಂ | Kannada Prabha

ಸಾರಾಂಶ

ಚಿಕ್ಕಮಗಳೂರುಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಆದಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ರೈತ ಸಂಘಟನೆಯಿಂದ ಅಭ್ಯರ್ಥಿಗಳಿಗೆ ಸರ್ವೋದಯ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಪರ್ಯಾಯ ರಂಗ ಸ್ಥಾಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಆದಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ರೈತ ಸಂಘಟನೆಯಿಂದ ಅಭ್ಯರ್ಥಿಗಳಿಗೆ ಸರ್ವೋದಯ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಪರ್ಯಾಯ ರಂಗ ಸ್ಥಾಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ಬೇರೆ ಬೇರೆ ಆಗಿದ್ದರೂ ಅವುಗಳ ನೀತಿ ಒಂದೇ ಆಗಿದೆ. ಯಾವುದೇ ಪಕ್ಷದ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ ರೈತರ ಸಮಸ್ಯೆ ಪರಿಹಾರವಾಗುತ್ತಿಲ್ಲ. ಹೀಗಾಗಿ, ಪರ್ಯಾಯ ರಾಜಕೀಯ ರಂಗ ಸ್ಥಾಪನೆಗೆ ಈಗಾಗಲೇ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸಮಾನ ಮನಸ್ಕರ ಪಕ್ಷಗಳು ಮತ್ತು ಸಂಘಟನೆಗಳ ಸಂಯುಕ್ತರಂಗ ಸೇರಿ ಮುಂದಿನ ಚುನಾವಣೆಯಲ್ಲಿ ಅಬ್ಯರ್ಥಿಗಳನ್ನು ಸ್ಪರ್ಧೆ ಗಿಳಿಸಲಾಗುವುದು. ಈಗಾಗಲೇ ಇಂದೂದರ ಹೊನ್ನಾಪುರ, ಹುಲ್ಕೆರೆ ಮಹಾದೇವ, ಗುರುಪ್ರಸಾದ್‌ ಕೆರೆಗೋಡು, ಮುನಿ ಸ್ವಾಮಿ, ಚಾಮರಸ ಮಾಲಿಪಾಟೀಲ್‌, ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಸರ್ವೋದಯ ಪಕ್ಷದ ಪ್ರಣಾಳಿಕೆ ರಚನೆಗೆ ಕರಡು ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

21ಕ್ಕೆ ಕೊಪ್ಪಳದಲ್ಲಿ ಸಮಾವೇಶ: 46ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ ಜು.21 ರಂದು ಮಂಗಳವಾರ ಬೆಳಗ್ಗೆ 11ಕ್ಕೆ ಬಲ್ಡೋಟಾ ಕಂಪನಿ ಗೇಟ್ ಎದುರು ನಡೆಸಲಾಗುವುದು. ನರಗುಂದ, ನವಲ ಗುಂದ ರೈತ ಬಂಡಾಯ ನಡೆದು 46 ವರ್ಷಗಳು ತುಂಬುತ್ತಿರುವ ಈ ಚಾರಿತ್ರಿಕ ಹಿನ್ನೆಲೆಯಲ್ಲಿ ರೂಪುಗೊಂಡ ರೈತ ಚಳುವಳಿ ರಾಜ್ಯದಲ್ಲೇ ಹಲವಾರು ಐತಿಹಾಸಿಕ ಹೋರಾಟಗಳನ್ನು ನಡೆಸಿ ದೇಶವ್ಯಾಪಿ ವಿಸ್ತರಿಸಿ ಗಡಿ ದಾಟಿ ಪ್ರಪಂಚದ ನಾನಾ ದೇಶ ಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನೇತ್ರಾವತಿ ಮಾಜಿ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ಮಂಜುನಾಥ್ ಉಪಸ್ಥಿತರಿದ್ದರು.ಫೋಟೋ:

ಬಡಗಲಪುರ ನಾಗೇಂದ್ರ ಫೋಟೋ ಬಳಸಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಿಗೆ ಕುಲಪತಿ ಗದ್ದುಗೆ ಕನಸು!
ಬೆಳೆ ವಿಮೆ ಗೊಂದಲ ಬಗೆಹರಿಸಿ, ಹಾವೇರಿ ಜಿಲ್ಲೆ ಬರಪೀಡಿತವೆಂದು ಘೋಷಿಸಲು ಆಗ್ರಹ