ಗಾಂಜಾ ಸಂಗ್ರಹ: ಯುವಕನ ವಿರುದ್ಧ ಪ್ರಕರಣ ದಾಖಲು

KannadaprabhaNewsNetwork |  
Published : Jun 11, 2026, 12:45 AM IST
ಜಗಲಬೆಟ್ ದಲ್ಲಿ ನಡೆದ ಅಪಘಾತ | Kannada Prabha

ಸಾರಾಂಶ

ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳ:

ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಅಬ್ರಾರ್ ಶೇಖ (೨೪), ಮೋಹಿದ್ದೀನ್ ಶೇಖ ಅವರ ಪುತ್ರ, ಫರ‍್ದೋಸ್ ನಗರ, ಹೆಬಳೆ, ಭಟ್ಕಳ ನಿವಾಸಿ ಎಂದು ಗುರುತಿಸಲಾಗಿದೆ.ಭಟ್ಕಳ ನಗರದ ಮುಗ್ಧುಂ ಕಾಲನಿಯ ಮೌಂಟಿನ್ ಗ್ರೌಂಡ್ ಪ್ರದೇಶದಲ್ಲಿ ಆರೋಪಿತನು ಯಾವುದೇ ಪರವಾನಿಗೆ ಇಲ್ಲದೆ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದಾನೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು.ದಾಳಿ ವೇಳೆ ಸುಮಾರು ೮೪ ಗ್ರಾಂ ಗಾಂಜಾ (ಅಂದಾಜು ಮೌಲ್ಯ ₹೫ ಸಾವಿರ) ಹಾಗೂ ಅದನ್ನು ಸಾಗಿಸಲು ಬಳಸಲಾಗಿದ್ದ ₹೫ ಲಕ್ಷ ಮೌಲ್ಯದ ಬಿಳಿ ಬಣ್ಣದ ಹೋಂಡಾ ಸಿಟಿ ಕಾರು ಪತ್ತೆಯಾಗಿ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಗಾಂಜಾ ಪ್ಯಾಕ್ ಮಾಡಲು ಬಳಸುವ ೧೨ ಸಣ್ಣ ಪಾರದರ್ಶಕ ಖಾಲಿ ಸ್ಯಾಚೆಟ್‌ಗಳು ಸಹ ದೊರೆತಿವೆ.ಈ ಹಿನ್ನೆಲೆ ಆರೋಪಿತನ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಆನಂದ ಹನುಮಂತ ಬೋವಿವಡ್ಡರ ಬಂಧಿತ.ಹೊಸಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಲೇಜು ರಸ್ತೆಯ ಶ್ರೀ ಮಾರಿಕಾಂಬಾ ಕ್ರೀಡಾಂಗಣದ ಹತ್ತಿರ ಗಾಂಜಾ ಸಾಗಾಟ, ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ.

ಆರೋಪಿ ಹತ್ತಿರ ಸುಮಾರು ₹10400 ಮೌಲ್ಯದ 217 ಗ್ರಾಂ ಗಾಂಜಾ ಹಾಗೂ 1 ಮೊಬೈಲ್ ಪೋನ್ ವಶಪಡಿಸಿಕೊಂಡಿದ್ದು, ಈ ಕುರಿತು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋದಿ ಆಡಳಿತ ಜಗತ್ತಿಗೆ ಮಾದರಿ: ವೀರಣ್ಣ
ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶ್ರಮಿಸಿ