ಉಗ್ರರನ್ನು ಸೆರೆ ಹಿಡಿದು ಕಠಿಣ ಶಿಕ್ಷೆ ನೀಡಿ

KannadaprabhaNewsNetwork |  
Published : Apr 25, 2025, 12:34 AM IST
 ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ಅಮಾನುಷ್ಯವಾಗಿ ದೇಶದ ಒಟ್ಟು ೨೮ ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಗುರುವಾರ ಭದ್ರಾವತಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ತಹಸೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಭದ್ರಾವತಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ಅಮಾನುಷ್ಯವಾಗಿ ದೇಶದ ೨೮ ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಗುರುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಭದ್ರಾವತಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ಅಮಾನುಷ್ಯವಾಗಿ ದೇಶದ ೨೮ ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಗುರುವಾರ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ರಂಗಪ್ಪವೃತ್ತದಿಂದ ಪಾದಯಾತ್ರೆ ಮೂಲಕ ತಾಲೂಕು ಕಚೇರಿವರೆಗೂ ಆಗಮಿಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಪ್ರಮುಖರು, ಇದೊಂದು ಹೇಯ ಕೃತ್ಯವಾಗಿದೆ. ಇಡೀ ದೇಶದ ಜನರು ಈ ಕೃತ್ಯವನ್ನು ಖಂಡಿಸಿದ್ದಾರೆ. ಈ ಹತ್ಯೆ ನಡೆಸಿದ ಉಗ್ರರನ್ನು ಸೆರೆ ಹಿಡಿದು ಕಠಿಣ ಶಿಕ್ಷೆ ವಿಧಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇಂತಹ ದುರ್ಘಟನೆಗಳನ್ನು ಬಿಜೆಪಿ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಕೆಲವರು ಮುಸಲ್ಮಾನರ ಒಳಸಂಚಿನಿಂದ ಈ ಕೃತ್ಯ ನಡೆದಿದೆ ಎಂದು ಆರೋಪ ಮಾಡುತ್ತಿರುವುದು ಸರಿಯಲ್ಲ. ಈ ದೇಶದಲ್ಲಿ ಮುಸಲ್ಮಾನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಈ ದುರ್ಘಟನೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯದಿಂದ ನಡೆದಿದೆ. ಇದಕ್ಕೆ ಕೇಂದ್ರ ಸರ್ಕಾರವೇ ಕಾರಣವಾಗಿದೆ ಎಂದು ಆರೋಪಿಸಿದರು. ಉಗ್ರರಿಗೆ ಯಾವುದೇ ಜಾತಿ, ಧರ್ಮವಿಲ್ಲ. ಉಗ್ರ ಕೃತ್ಯಗಳನ್ನು ನಡೆಸುವುದೇ ಅವರ ಧ್ಯೇಯವಾಗಿರುತ್ತದೆ. ಇಂತಹ ಉಗ್ರರು ಯಾರೇ ಆಗಿರಲಿ, ಯಾವುದೇ ದೇಶಕ್ಕೆ ಸೇರಿದವರಾಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದೇಶದ ೨೮ ಮಂದಿ ಪ್ರವಾಸಿಗರು ಹತ್ಯೆಯಾದ ರೀತಿಯಲ್ಲೇ ಉಗ್ರರನ್ನು ಸಹ ನಡು ರಸ್ತೆಯಲ್ಲಿ ಹತ್ಯೆ ಮಾಡಬೇಕೆಂದು ಆಗ್ರಹಿಸಿದರು.

ಬ್ಲಾಕ್ ನಗರ ಘಟಕದ ಅಧ್ಯಕ್ಷ ಎಸ್.ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ್, ತಾಲೂಕು ಅಧ್ಯಕ್ಷೆ ಸುಕನ್ಯ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ.ಗಂಗಾಧರ್, ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಎಂ.ರಮೇಶ್‌ಶೆಟ್ಟಿ ಶಂಕರಘಟ್ಟ, ಎನ್‌ಎಸ್‌ಯುಐ ತಾಲೂಕು ಅಧ್ಯಕ್ಷ ಮುಸ್ವೀರ್ ಬಾಷಾ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಬಿ.ಕೆ.ಮೋಹನ್, ವಿ.ಕದಿರೇಶ್, ಬಿ.ಟಿ.ನಾಗರಾಜ್, ಕಾಂತರಾಜ್, ಲತಾ ಚಂದ್ರಶೇಖರ್, ಅನುಸುಧಾ ಮೋಹನ್ ಪಳನಿ, ಐ.ವಿ.ಸಂತೋಷ್ ಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್.ಮಣಿಶೇಖರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಸೂಡಾ ಸದಸ್ಯ ಎಚ್.ರವಿಕುಮಾರ್, ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪ, ನಾಮನಿರ್ದೇಶಿತ ಸದಸ್ಯೆ ವಿಜಯಲಕ್ಷ್ಮೀ, ಪ್ರಮುಖರಾದ ಸಿ.ಎಂ.ಖಾದರ್, ಎಂ.ಶಿವಕುಮಾರ್, ದಿಲ್‌ದಾರ್, ಅಮೀರ್ ಜಾನ್, ವೈ.ರೇಣುಕಮ್ಮ, ಎಂ.ಎಸ್.ಸುಧಾಮಣಿ, ಸಿ.ಜಯಪ್ಪ, ಜುಂಜ್ಯಾನಾಯ್ಕ, ಶೋಭಾ ರವಿಕುಮಾರ್, ಅಭಿಲಾಷ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ