*ಬನ್ನೇರುಘಟ್ಟ ಮುಖ್ಯರಸ್ತೆ ಟಿ-ಜಾನ್ ಕಾಲೇಜಿನ ವಿದ್ಯಾರ್ಥಿಗಳು
*ತಿರುವಿನಲ್ಲಿ ಅತೀ ವೇಗವಾಗಿ ಕಾರು ಚಲಾಯಿಸಿದ ವಿದ್ಯಾರ್ಥಿಗಳು
*ನಿಯಂತ್ರಣ ಸಿಗದೇ ಮರಕ್ಕೆ ಅಪ್ಪಳಿಸಿದ ಕಾರು, ಇಬ್ಬರ ಸಾವುಕನ್ನಡಪ್ರಭ ವಾರ್ತೆ ಬೆಂಗಳೂರು ದಕ್ಷಿಣತಿರುವಿನಲ್ಲಿ ಅತಿವೇಗವಾಗಿ ವಾಹನ ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬನ್ನೇರುಘಟ್ಟ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಜಾಲಿ ರೈಡ್ ಮಾಡುವ ಸಲುವಾಗಿ ರಾತ್ರಿ 11ರ ಸಮಯದಲ್ಲಿ ಬನ್ನೇರುಘಟ್ಟ ಬಳಿಯ ರಾಗಿಹಳ್ಳಿ ಬಳಿ ತೆರಳುವ ಸಮಯದಲ್ಲಿ ತೀವ್ರ ತಿರುವಿನಲ್ಲಿ ಅತಿ ವೇಗವಾಗಿ ಕಾರನ್ನು ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಸ್ಥಳಕ್ಕೆ ದೌಡಾಯಿಸಿದ ಬನ್ನೇರುಘಟ್ಟ ಪೋಲಿಸರು ಮೃತ ವಿದ್ಯಾರ್ಥಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರ ಮಾಡಿದ್ದಾರೆ.