)
ಶ್ರೀನಿವಾಸಪುರ:ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ ಉಳಿದ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದೆ.ತಾಲ್ಲೂಕಿನ ಕಪ್ಪಲ್ಲಿ ಗ್ರಾಮದ ಬಳಿ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಕುಶಾಲ್ (25) ಮೃತಪಟ್ಟ ಯುವಕನಾಗಿದ್ದಾನೆ. ಓರ್ವ ಯುವತಿ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದಾರೆ.ಗಾಯಾಳುಗಳು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕ್ಸಿತೆ ಪಡೆಯುತ್ತಿದ್ದಾರೆ, ಚಿಂತಾಮಣಿಯಿಂದ ಲಕ್ಷ್ಮೀಪುರ ಕ್ರಾಸ್ ಬಳಿ ರೆಸ್ಟೋರೆಂಟ್‌ಗೆ ತೆರಳಿ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ. ಗೌನಿಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.