ಕಾರು ಅಪಘಾತ: ಪ್ರಯಾಣಿಕರು ಪವಾಡಸದೃಶ ಪಾರು

KannadaprabhaNewsNetwork |  
Published : Dec 14, 2024, 12:49 AM IST
13ಕೆಎಂಎನ್ ಡಿ26 | Kannada Prabha

ಸಾರಾಂಶ

ಬೆಂಗಳೂರಿನ ವಿಕ್ರಂ ತಮ್ಮ ಕುಂಟುಂಬ ಸದಸ್ಯರೊಂದಿಗೆ ಮೈಸೂರಿಗೆ ತೆರಳಿ ವಾಪಸ್ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಗಣಂಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿ ವಿಕ್ರಂ ಹಾಗೂ ತಾಯಿ, ಹೆಂಡತಿ, ಅಜ್ಜಿ ಜೊತೆಗೆ 7 ರಿಂದ 8 ವರ್ಷದ ಮಗು ಇದ್ದುದ್ದಾಗಿ ತಿಳಿದು ಬಂದಿದೆ.

ಶ್ರೀರಂಗಪಟ್ಟಣ: ಚಾಲಕನ ನಿಯಂತ್ರಣ ತಪ್ಪಿ ಕಾರು ಭೀಕರ ಅಪಘಾತಕ್ಕೀಡಾಗಿ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಗಣಂಗೂರು ಬಳಿಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನ ವಿಕ್ರಂ ತಮ್ಮ ಕುಂಟುಂಬ ಸದಸ್ಯರೊಂದಿಗೆ ಮೈಸೂರಿಗೆ ತೆರಳಿ ವಾಪಸ್ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ ಗಣಂಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿ ವಿಕ್ರಂ ಹಾಗೂ ತಾಯಿ, ಹೆಂಡತಿ, ಅಜ್ಜಿ ಜೊತೆಗೆ 7 ರಿಂದ 8 ವರ್ಷದ ಮಗು ಇದ್ದುದ್ದಾಗಿ ತಿಳಿದು ಬಂದಿದೆ. ತಾಲೂಕಿನ ಗಣಂಗೂರು ಬಳಿ ಆಗಮಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಎಡಭಾಗದ ಡಿವೈಡರ್ ಗುದ್ದಿದ ಪರಿಣಾಮ ಕಾರು ಪಲ್ಟಿಯಾಗಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ 5 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರ ಸಂಚಾರಕ್ಕೆ ತೊಂದರೆಯಾಗಿತ್ತು. ತಕ್ಷಣ ಹೆದ್ದಾರಿ ನಿರ್ವಹಣೆಯವರು ಸ್ಥಳಕ್ಕೆ ಆಗಮಿಸಿ ಅಪಘಾತಗೊಂಡಿದ್ದ ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವಿಷಯ ತಿಳಿದ ಶ್ರೀರಂಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲೊಂದು ಮಹಾ ಸೈಬರ್‌ ಸುಲಿಗೆ : ರಾಜ್ಯದ ದೊಡ್ಡ ಡಿಜಿಟಲ್‌ ಅರೆಸ್ಟ್‌
ಅವಶ್ಯಕತೆ ಇದ್ದರೆ ರಾಜ್ಯಸಭೆಗೆ ಗೌಡರು ಹೋಗುವ ಬಗ್ಗೆ ಬಿಜೆಪಿ ತೀರ್ಮಾನಿಸುತ್ತೆ: ಎಚ್ಡಿಕೆ