ಕನ್ನಡಪ್ರಭ ವಾರ್ತೆ, ಬೀರೂರು
ತುಮಕೂರು ಜಿಲ್ಲೆ ಗುಬ್ಬಿ ಮೂಲದ 2 ವರ್ಷದ ಮಗು ವಿಕ್ರಾಂತ್ ಹಾಗೂ ಕಾರು ಚಾಲಕ ಪೃಥ್ವಿ (26) ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮುರುಡೇಶ್ವರ ದೇವಸ್ಥಾನಕ್ಕೆಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬೆಂಗಳೂರು-ಶಿವಮೊಗ್ಗ ರಾ.ಹೆದ್ದಾರಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯರಸ್ತೆಯನ್ನು ಬಂದ್ ಮಾಡಲಾಗಿತ್ತು. ಆದರೆ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿರಲಿಲ್ಲ ಎನ್ನಲಾಗಿದೆ. ಮುಖ್ಯ ರಸ್ತೆ ಬಂದ್ ಆಗಿದ್ದರಿಂದ ಬೈಪಾಸ್ ತಿರುವು ಪಡೆಯಲು ಹೋಗಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..