ಕುಶಾಲನಗರ ಆನೆಕಾಡು: ಸರಣಿ ಅಪಘಾತಕ್ಕೆ ಮೂವರು ಬಲಿ

KannadaprabhaNewsNetwork |  
Published : Sep 22, 2026, 02:45 AM IST
ಆದರ್ಶ | Kannada Prabha

ಸಾರಾಂಶ

ಕುಶಾಲನಗರ ಸಮೀಪದ ಆನೆಕಾಡು ಬಳಿ ಹೆದ್ದಾರಿಯಲ್ಲಿ ವಾಹನಗಳ ಸರಣಿ ಅಪಘಾತ ನಡೆದು ಮೂರು ಮಂದಿ ಮೃತಪಟ್ಟಿದ್ದು ಏಳು ಜನ ತೀವ್ರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರು ಮತ್ತು ಪಿಕಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೂರ್ನಾಡು ನಿವಾಸಿ ಕುಮಾರ(42) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹೊಸಕೋಟೆಯ ನಿವಾಸಿಗಳಾದ ಆದರ್ಶ (26) ರತನ್ಉಣ್ಣಿ (36) ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಏಳು ಮಂದಿಯನ್ನು ಮಡಿಕೇರಿ ಮೈಸೂರು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಶಾಲನಗರ: ಕುಶಾಲನಗರ ಸಮೀಪದ ಆನೆಕಾಡು ಬಳಿ ಹೆದ್ದಾರಿಯಲ್ಲಿ ವಾಹನಗಳ ಸರಣಿ ಅಪಘಾತ ನಡೆದು ಮೂರು ಮಂದಿ ಮೃತಪಟ್ಟಿದ್ದು ಏಳು ಜನ ತೀವ್ರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರು ಮತ್ತು ಪಿಕಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೂರ್ನಾಡು ನಿವಾಸಿ ಕುಮಾರ(42) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹೊಸಕೋಟೆಯ ನಿವಾಸಿಗಳಾದ ಆದರ್ಶ (26) ರತನ್ಉಣ್ಣಿ (36) ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಏಳು ಮಂದಿಯನ್ನು ಮಡಿಕೇರಿ ಮೈಸೂರು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸಕೋಟೆಯ ನಿವಾಸಿಗಳಾದ ಅಜಯ್, ಚಂದ್ರಶೇಖರ್, ಅಖಿಲ್, ಸುಬಿನ್, ನಿಶಾಂತ್, ಮಧು, ನಿವೇದ್ ಅವರು ಚಿಕಿತ್ಸೆ ಪಡೆಯುತ್ತಿದ್ದು ಅಖಿಲ್ ಮತ್ತು ನಿಶಾಂತ್ ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸಕೋಟೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಕಾರು ಚಾಲಕನ ವೇಗದ ಚಾಲನೆ ಹಾಗೂ ನಿರ್ಲಕ್ಷ್ಯ ಘಟನೆಗೆ ಕಾರಣ ಎನ್ನಲಾಗಿದೆ. ಕುಶಾಲನಗರ ಟೌನ್ ಪೋಲಿಸ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರ್ನಾಡಿನಲ್ಲಿ ವಿಜೃಂಭಣೆಯ ಗಣೇಶ ವಿಸರ್ಜನಾ ಮಹೋತ್ಸವ
ಬರಹಗಾರರಿಗೆ ಸಾಮಾಜಿಕ ಜವಾಬ್ದಾರಿ ಇದೆ: ಪ್ರೊ.ಧರ್ಮ