ಬಸ್‌, ಬೈಕ್‌ಗಳಿಗೆ ಕಾರ್‌ ಡಿಕ್ಕಿ: ಮಹಿಳೆ ಸಾವು, 12 ಜನ ಗಾಯ

KannadaprabhaNewsNetwork |  
Published : Jun 30, 2024, 12:46 AM ISTUpdated : Jun 30, 2024, 12:47 AM IST
ಆಫಘಾತ | Kannada Prabha

ಸಾರಾಂಶ

ಗೋಕಾಕ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮುಂದಿನ ಬೈಕ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗೆ ಸರಣಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿ 12 ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಭವಿಸಿದೆ.

ಗೋಕಾಕ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮುಂದಿನ ಬೈಕ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗೆ ಸರಣಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿ 12 ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಭವಿಸಿದೆ.

ನಗರದ ಪ್ರವಾಸಿ ಮಂದಿರದಿಂದ ನಾಕಾ ನಂ-1ರಲ್ಲಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ತೆರಳುತ್ತಿದ್ದ ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಇನ್ನುಳಿದ 12 ಜನರಿಗೆ ಕೈ, ಕಾಲು ಮುರಿದು ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ ಶಹರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿಗೆ ಬಂಜಾರ ಸಮಾಜದ ವಿರೋಧ
ಜಿಲ್ಲೆಗೆ ಒಲಿದುಬಂದ 17ಕ್ಕೂ ಅಧಿಕ ಕೊಡುಗೆಗಳು