ಅನಿಲ ಸಾಗಾಟ ಲಾರಿಗೆ ಕಾರು ಡಿಕ್ಕಿ: ಪ್ರಯಾಣಿಕರು ಪಾರು

KannadaprabhaNewsNetwork |  
Published : Jun 16, 2025, 01:28 AM ISTUpdated : Jun 16, 2025, 01:29 AM IST
ಗ್ಯಾಸ್ ಲಾರಿಗೆ ಕಾರು ಡಿಕ್ಕಿ: ಸವಾರರು ಅಪಾಯದಿಂದ ಪಾರು | Kannada Prabha

ಸಾರಾಂಶ

ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್‌ ಸವಾರರು ಅಪಾಯದಿಂದ ಪಾರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಮಡಿಕೇರಿಯಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಕಾರು ಹಾಗೂ ಪಟ್ಟಣದಿಂದ ಕೋವರ್‌ಕೊಲ್ಲಿ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಇಲ್ಲಿನ ನ್ಯಾಯಾಲಯದ ಸಮೀಪ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರರು ಅಪಾಯದಿಂದ ಪಾರಾಗಿದ್ದಾರೆ.ಪಿರಿಯಾಪಟ್ಟಣದ ನಿವಾಸಿ ಪ್ರತೀಶ್ ಎಂಬವರು ಕಾರಿನಲ್ಲಿ ತಮ್ಮ ಸ್ನೇಹಿತರೊಂದಿಗೆ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಂದರ್ಭ ಇಲ್ಲಿನ ನ್ಯಾಯಾಲಯದ ಮುಂಭಾಗ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

------------------------

ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕೆ ಆಹ್ವಾನಮಡಿಕೇರಿ: ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ ದಿನಾಂಕ: 2024 ಜ. 1ರಿಂದ 2024 ಡಿ.. 31ರ ವರೆಗೆ ಪ್ರಥಮ ಅವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಜೂ. 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 3 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು/ ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?