ಕಾರು ಮೋರಿಗೆ ಡಿಕ್ಕಿ: ಮೂವರಿಗೆ ಅಲ್ಪ ಗಾಯ

KannadaprabhaNewsNetwork |  
Published : May 03, 2026, 02:45 AM IST
 ಅಪಘಾತಕ್ಕೆ ಒಳಗಾದ ಕಾರು | Kannada Prabha

ಸಾರಾಂಶ

ಮೈಸೂರಿನಿಂದ ಕುಶಾಲನಗರ ಮೂಲಕ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದಿದೆ.

ಕುಶಾಲನಗರ: ಮೈಸೂರಿನಿಂದ ಕುಶಾಲನಗರ ಮೂಲಕ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದಿದೆ.

ಶನಿವಾರ ಮುಂಜಾನೆ ಆನೆಕಾಡು ಹೊಸಕೋಟೆ ನಡುವೆ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂರು ಮಂದಿಗೆ ಅಲ್ಪ ಸ್ವಲ್ಪ ಗಾಯಗಳು ಉಂಟಾಗಿದೆ. ಮೈಸೂರಿನ ನಿವಾಸಿಗಳಾದ ಆನಂದ, ತಿಲಕ್, ಮನೋಜ್ ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

------------------------------

ಹೋಂ-ಸ್ಟೇ ನೋಂದಣಿ ಕಡ್ಡಾಯ

ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂ ಸ್ಟೇಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

ಕನ್ನಡಪ್ರಭ ವಾರ್ತೆ ಮಡಿಕೇರಿಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರ ಅಧಿನಿಯಮ 8 ಉಪ ಕಂಡಿಕೆ (3)ರ ಅಡಿಯಲ್ಲಿ ನಿಯಮಗಳನ್ನು ರಚಿಸಲಾಗಿದೆ. ಈ ಪ್ರಕಾರ ಯಾವ ವ್ಯಕ್ತಿ ಪ್ರವಾಸೋದ್ಯಮ ಚಟುವಟಿಕೆ ನಡೆಸುವ ಸಲುವಾಗಿ ಹೋಂ-ಸ್ಟೇ ಹಾಗೂ ಇತರೆ ಹೆಸರುಗಳಿಂದ ಪ್ರವಾಸಿಗರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆಯೋ ಅಂತಹ ವ್ಯಕ್ತಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಮಾಡಿಕೊಂಡಿಲ್ಲ ಎಂದು ತಿಳಿದುಬಂದಿದೆ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ ಹಾಗೂ ನೋಂದಾಣಿಯಾಗದೆ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಅನಧೀಕೃತ ಚಟುವಟಿಕೆಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ನಡೆಸುತ್ತಿರುವ ಹೋಂ-ಸ್ಟೇಗಳ ಪರವಾನಿಗಿಯನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಆದಾಗ್ಯೂ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ.ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಗಿ ಪಡೆದು ಕಾರ್ಯನಿರ್ವಹಿಸುತ್ತಿರುವ ಮತ್ತು ಪರವಾನಗಿ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಗಿಯನ್ನು ನವೀಕರಿಸುವಂತೆ ಈ ಮೂಲಕ ತಿಳಿಸಲಾಗಿದೆ.

ಇವುಗಳಲ್ಲದೆ ಮಾಹಿತಿ ಇಲ್ಲದೆ ಅನಧಿಕೃತವಾಗಿ ನಡೆಸುತ್ತಿರುವ ಹೋಂ-ಸ್ಟೇಗಳ ಬಗ್ಗೆ ಹಾಗೂ ಹೋಂ-ಸ್ಟೇ ನೋಂದಣಿ ಮಾಡಿಕೊಳ್ಳುವ ಬಗ್ಗೆ ಸಾರ್ವಜನಿಕರು ದೂರು/ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಇ-ಮೇಲ್: ddkodagutourism@gmail.com ಅಥವಾ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 112ಗೆ ತಿಳಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ
ರಾಯಲ್‌ ಸ್ಕೂಲ್‌ ಸೌಲಭ್ಯಗಳು ರಾಜ್ಯಕ್ಕೆ ಮಾದರಿ