ಕಾರು ಡಿಕ್ಕಿ<bha>;</bha> ಮದುವೆ ನಿಗದಿಯಾಗಿದ್ದ ಯುವತಿ ಸಾವು

KannadaprabhaNewsNetwork |  
Published : Dec 30, 2023, 01:15 AM IST
ಕಾರು ಡಿಕ್ಕಿ- ಮದುವೆ ನಿಗದಿಯಾಗಿದ್ದ ಯುವತಿ ಸಾವು | Kannada Prabha

ಸಾರಾಂಶ

ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರಾ ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ಅಪಘಾತದಲ್ಲಿ ತೀವ್ರ ಗಾಯಗೊಂಡ ಆಕೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿತ್ತು. ಕೊಡ್ಯಡ್ಕದ ಯುವಕನ ಜೊತೆ ಮಾ.3 ಕ್ಕೆ ಮದುವೆ ನಿಗದಿಯಾಗಿತ್ತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ರಸ್ತೆ ಅಪಘಾತದಲ್ಲಿ ಕಾರು ಡಿಕ್ಕಿಯಾಗಿ ಬಿ.ಸಿ.ರೋಡ್ ಸಮೀಪ ಗಂಭೀರವಾಗಿ ಗಾಯಗೊಂಡು ಗುರುವಾರ ರಾತ್ರಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ. ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿದ್ದು, ಇಲ್ಲಿನ ಸ್ಥಳೀಯ ‌ನಿವಾಸಿ ಚೈತ್ರಾ (22 ) ಮೃತಳು.ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರಾ ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಸ್ವಿಫ್ಟ್‌ ಕಾರು ಇವಳಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಇವಳನ್ನು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್, ಹಾಗೂ ಎಚ್.ಸಿ.ರಮೇಶ್ ಅವರು ಖಾಸಗಿ ವಾಹನದ ಮೂಲಕ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಗಂಭೀರವಾಗಿ ಗಾಯಗೊಂಡಿರುವ ಈಕೆ ತುರ್ತು ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು, ಆದರೆ ಮಧ್ಯ ರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಪಾದಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು , ಮನೆಯೊಂದರ ಕಾಂಪೌಂಡ್ ಗೆ ಕೂಡ ಗುದ್ದಿ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರು ಚಾಲಕ ಹಾಗೂ ಹಾಗೂ ಇವನ ಜೊತೆ ಇದ್ದ ಮೂವರು ಸಹಪ್ರಯಾಣಿಕ ಪರಾರಿಯಾಗಿದ್ದಾರೆ. ಇವರು ಕಾರಿನಲ್ಲಿ ಮಲ್ಲೂರು ಕಡೆ ಹೋಗುವವರು ಎಂದು ಹೇಳಲಾಗಿದೆ.ಮೆಲ್ಕಾರ್ ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ‌ಬೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮದುವೆಗೆ ನಿಶ್ಚಿತಾರ್ಥ ನಡೆದಿತ್ತು: ಚೈತ್ರ ಅವಳು ಖ್ಯಾತ ಮೇಕಪ್ ಆರ್ಟಿಸ್ಟ್ ದಿ. ಭಾಸ್ಕರ್ ಆಚಾರ್ಯ ಅವರ ಮಗಳು. ಮಂಗಳೂರಿನ‌ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ರಜಾ ಪಡೆದುಕೊಂಡಿದ್ದಳು.ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿದೆ. ಕೊಡ್ಯಡ್ಕದ ಯುವಕನ ಜೊತೆ ಮಾ.3 ಕ್ಕೆ ಮದುವೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯೂ ಮುದ್ರಣಗೊಂಡಿದ್ದು, ಶುಕ್ರವಾರದಿಂದ ಇದರ ವಿತರಣೆಗೂ ಸಕಲ ಸಿದ್ದತೆ ನಡೆದಿತ್ತು.ಗಾಂಜಾ ಸೇವಿಸಿದ್ದರಾ?: ಗಾಂಜಾ ಸೇವನೆ ಮಾಡಿ ಕಾರು ಓಡಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಬಗ್ಗೆ ಪೊಲೀಸರಿಗೆ ಸಂಬಂಧಿಕರು ದೂರು ನೀಡಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು
ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ