ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಕಾರು

KannadaprabhaNewsNetwork |  
Published : Aug 24, 2026, 03:15 AM IST
ಪಪಪಪ | Kannada Prabha

ಸಾರಾಂಶ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಎಸ್‌ಜಿ ರಸ್ತೆ ಬಳಿ ನಡೆದಿದೆ. ವಿರೂಪಾಕ್ಷಿ ದೋನೆವಾಡಿ ಅವರಿಗೆ ಸೇರಿದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಎಸ್‌ಜಿ ರಸ್ತೆ ಬಳಿ ನಡೆದಿದೆ. ವಿರೂಪಾಕ್ಷಿ ದೋನೆವಾಡಿ ಅವರಿಗೆ ಸೇರಿದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಬೆಂಕಿ ಕಾರಿನ ಮುಂಭಾಗವನ್ನು ಆವರಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡರು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಂಕೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಸ್ಟ್.....ಜರ್ಮನಿಯ ಕನ್ಯೆ ಕೈಹಿಡಿದ ಬಾಗಲಕೋಟೆ ವರ
ರಾಯಲ್ ಸ್ಕೂಲ್‌ನಲ್ಲಿ ಎಐ ಲ್ಯಾಬ್ ಆರಂಭ