ದೇವರಹಿಪ್ಪರಗಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ವೇಗವಾಗೊ ಬಂದ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ನಿಲ್ಲಿಸಿದೇ ಪರಾರಿಯಾಗಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಬಳಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇಬ್ಬರು ಪಟ್ಟಣದ ಬಸ್ ನಿಲ್ದಾಣದಿಂದ ತಾಳಿಕೋಟೆ ರಸ್ತೆ ಮಾರ್ಗವಾಗಿ ಮನೆ ಕಡೆಗೆ ಹೋಗುವಾಗ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಕಾರು ಗುದ್ದಿದ ರಭಸಕ್ಕೆ ರಸ್ತೆಯ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿವೆ. ಭೀಕರ ರಸ್ತೆ ಅಪಘಾತವಾದರು ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದನು. ಕಾರು ಹಾಗೂ ಚಾಲಕನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬಳಿಕ, ದೇವರ ಹಿಪ್ಪರಗಿಯ ಕಾರ್ ಚಾಲಕ ರಿಯಾಜ್ ದುಮ್ಮದರಿ ಸೇರಿದಂತೆ ಕಾರ್‌ನ್ನು ಸ್ಥಳೀಯರು ಪತ್ತೆ ಮಾಡಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.