ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ– ಮೆಳೇಕೋಟೆ ರಸ್ತೆಯ ಕಾಚಹಳ್ಳಿ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳನ್ನು ತಕ್ಷಣ ಖಾಸಗಿ ಕಾರಿನಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಸ್ಥಳೀಯರು ಹಲವು ತಿಂಗಳಿನಿಂದ ಈ ರಸ್ತೆಯ ಹಾಳಾದ ಸ್ಥಿತಿಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ದುರಸ್ತಿ ಕಾರ್ಯ ಕೈಗೊಳ್ಳದಿರುವುದರಿಂದ ಅಪಘಾತಗಳು ನಿರಂತರವಾಗಿ ನಡೆಯುತ್ತಿದ್ದು ಕೂಡಲೇ ರಸ್ತೆ ದುರಸ್ಥಿ ಮಾಡುವಂತೆ ಆಗ್ರಹಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಫೋಟೋ-30ಕೆಡಿಬಿಪಿ3- ತೂಬಗೆರೆ-ಮೆಳೇಕೋಟೆ ರಸ್ತೆಯಲ್ಲಿ ಸಂಭವಿಸಿರುವ ಅಪಘಾತದಲ್ಲಿ ಜಖಂಗೊಂಡಿರುವ ಸರಕು ಸಾಗಣೆ ಆಟೋ.