ಚನ್ನಪಟ್ಟಣ: ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿಯ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಕೇರಳ ಮೂಲದ ಅನಥ್ (35) ಮೃತ ವ್ಯಕ್ತಿ. ಈತ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಬೈರಾಪಟ್ಟಣ ಗ್ರಾಮದ ಬಳಿಯ ಬಮೂಲ್ ಹಾಲು ಶಿಥಲೀಕರಣ ಕೇಂದ್ರದ ಮುಂಭಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈತನ ತಲೆ ಸಂಪೂರ್ಣ ಜಜ್ಜಿ ಹೋಗಿದೆ. ಸ್ಥಳಕ್ಕೆ ಸಂಚಾರ ಪಿಎಸ್‌ಐಗಳಾದ ಶುಭಾಂಬಿಕಾ ಹಾಗೂ ಪಾಂಡು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.