ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ: ಆನಂದ್ ಪ್ರಕಾಶ್ ಮೀನ

KannadaprabhaNewsNetwork |  
Published : Mar 28, 2026, 02:30 AM IST
ಕಾರ್ಯಕ್ರಮ ಉದ್ಘಾಟನೆ ಸಂದರ್ಭ | Kannada Prabha

ಸಾರಾಂಶ

ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಉತ್ತಮ ಕಾರ್ಯಕ್ರಮವಾಗಿದ್ದು, ಉದ್ಯೋಗಾಂಕ್ಷಿಗಳು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ಹಹಣಾಧಿಕಾರಿ ಆನಂದ್ ಪ್ರಕಾಶ್ ಮೀನ ಹೇಳಿದರು.

ಕುಶಾಲನಗರ: ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಉತ್ತಮ ಕಾರ್ಯಕ್ರಮವಾಗಿದ್ದು, ಉದ್ಯೋಗಾಂಕ್ಷಿಗಳು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ಹಹಣಾಧಿಕಾರಿ ಆನಂದ್ ಪ್ರಕಾಶ್ ಮೀನ ಹೇಳಿದರು.

ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಡಯಟ್ ಸಂಸ್ಥೆ ಆವರಣದಲ್ಲಿ ನನ್ನ ವೃತ್ತಿ ನನ್ನ ಆಯ್ಕೆ ಎಂಬ ಶೀರ್ಷಿಕೆಯಡಿ ಏರ್ಪಡಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಉದ್ಘಾಟಿಸಿ ಮಾತನಾಡಿದರು.

ವೃತ್ತಿಪರ ಉದ್ದೇಶ ಮತ್ತು ವೃತ್ತಿ ಮಾರ್ಗದರ್ಶನ ಮೇಳದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಡಯಟ್ ಸಂಸ್ಥೆಯ ಪ್ರಾಂಶುಪಾಲ, ಪದನಿಮಿತ್ತ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್ ಮಾತನಾಡಿ ಈ ಘಟಕದ ವತಿಯಿಂದ ವೃತ್ತಿ ಮಾರ್ಗದರ್ಶನ ಮಾಹಿತಿ ನೀಡಲಾಗುತ್ತಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಆರ್.ವಿಜಯ್ ಮಾತನಾಡಿ, ಇಂತಹ ವೃತ್ತಿಪರ ಮೇಳಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿಗಳಿಗೆ ವೃತ್ತಿ ಆಯ್ಕೆ ಹಾಗೂ ಬ್ಯಾಂಕ್ ಉದ್ಯೋಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಜಿಲ್ಲಾ ಲೀಡ್ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಆರ್.ಕೆ.ಬಾಲಚಂದ್ರ ಮಾಹಿತಿ ನೀಡಿದರು. ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ ಎನ್.ಎಸ್.ಸತೀಶ್, ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಯ ಪ್ರವೇಶ ಹಾಗೂ ವೃತ್ತಿ ಮಾರ್ಗದರ್ಶನ ನೀಡಿದರು. ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಎಚ್.ಎಚ್.ಸತೀಶ್, ವೃತ್ತಿಮೇಳದ ಉದ್ದೇಶ ತಿಳಿಸಿದರು. ಡಿವೈಪಿಸಿಗಳಾದ ಸೌಮ್ಯ ಪೊನ್ನಪ್ಪ, ಎಂ.ಕೃಷ್ಣಪ್ಪ, ಬಿಇಓಗಳಾದ ಎಂ.ಕೃಷ್ಣಪ್ಪ, ಆರ್.ಪಿ.ಮಹೇಶ್, ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಎನ್.ವಿ.ಸ್ವಾಮಿ, ಬಿ.ಎನ್.ಪುಷ್ಪ, ಆರ್. ಹೇಮಂತರಾಜ್, ಉಪನ್ಯಾಸಕ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಜಗದೀಶ್, ಗೀತಾ, ಗಾಯತ್ರಿ, ಬಿ ಆರ್ ಸಿ ಎಂ.ವಿ.ಮಂಜೇಶ್, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಆರ್.ಮಂಜುನಾಥ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮಡಿಕೇರಿ ಐ.ಟಿ.ಐ. ಸಂಸ್ಥೆಯ ತರಬೇತಿಯ ಸಂಯೋಜಕ ಸಿ.ಕೆ.ಇಂದ್ರೇಶ್, ಸಿಪಾಯಿ ಅಕ್ಷಯ್ ಕೆ.ಎಸ್., ಕೂಡಿಗೆ ವೈದ್ಯಾಧಿಕಾರಿ ಡಾ ಪೂರ್ಣ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾನೀಯ ಸಮಿತಿ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಇದ್ದರು. ಶಿಕ್ಷಕ ಎಸ್.ಪಿ.ಪರಮೇಶ್ ನಿರ್ವಹಿಸಿದರು. ಶಿಕ್ಷಕ ಬಸವರಾಜ್ ಬಡಿಗೇರ್ ಗೀತೆ ಹಾಡಿದರು.

ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ ಎನ್.ಎಸ್.ಸತೀಶ್ , ಸಿಇಟಿ, ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ಹಾಗೂ ತಾಂತ್ರಿಕ ಕೋರ್ಸ್ ಗಳ ಕುರಿತು, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ್, ಉದ್ಯೋಗಾವಕಾಶಗಳ ಕುರಿತು ಮಡಿಕೇರಿ ಐಟಿಐ ಸಂಸ್ಥೆಯ ತರಬೇತಿ ಸಂಯೋಜಕ ಸಿ.ಕೆ.ಇಂದ್ರೇಶ್, ಐಟಿಐ ವೃತ್ತಿಪರ ಕೋರ್ಸ್ ಗಳ ಬಗ್ಗೆ ಮಾಹಿತಿ ನೀಡಿದರು. ಇಂಡಿಯನ್ ಮಿಲಿಟರಿ ಅಕಾಡೆಮಿಗೆ ಆಯ್ಕೆಯಾಗಿರುವ ಸಿಪಾಯಿ ಅಕ್ಷಯ್ ಕೆ.ಎಸ್. ಸೇನಾ ಅಧಿಕಾರಿಗಳ ಹುದ್ದೆಗೆ ಸೇರುವ ಕೋರ್ಸ್ ಗಳ ಬಗ್ಗೆ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರಿ ನಿರ್ಧಾರದಲ್ಲಿ ಸ್ಪಷ್ಟತೆ ಅಗತ್ಯ: ಡಾ.ಕುರಿಯನ್‌
ಬನ್ನಂಜೆ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಸಂಪನ್ನ