ಕನ್ನಡಪ್ರಭ ವಾರ್ತೆ ಕುಶಾಲನಗರ
ಡಯಟ್ ಸಂಸ್ಥೆಯಲ್ಲಿ ಆರಂಭಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ಮೂಲಕ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.
ವೃತ್ತಿ ಮಾರ್ಗದರ್ಶನ ಘಟಕ ಹಾಗೂ ರೂಪುರೇಷೆ ಕುರಿತು ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಡಯಟ್ ಸಂಸ್ಥೆ ಮೂಲಕ ಜಿಲ್ಲಾ ಮಟ್ಟದ ವೃತ್ತಿ ದಿಕ್ಸೂಚಿ, ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ವೃತ್ತಿ ಮಾರ್ಗದರ್ಶನ ಕೆರಿಯರ್ ಮೇಳ-2026ವನ್ನು ಕೂಡ ಸಂಘಟಿಸಲಾಗಿದೆ ಎಂದು ಅವರುಹೇಳಿದರು.ಈ ವೃತ್ತಿ ಮಾರ್ಗದರ್ಶನ ಘಟಕದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರದ ಕೋರ್ಸ್‌ಗಳು, ಪ್ರವೇಶ ಪರೀಕ್ಷೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಭವಿಷತ್ತಿನ ದೃಷ್ಠಿಯಿಂದ ಉದ್ಯೋಗಾವಕಾಶಗಳ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ. ಶಾಂತಿ, ವೃತ್ತಿಪರ ಘಟಕ ಸಮಿತಿ ಕಾರ್ಯದರ್ಶಿ ಎಚ್.ಎಚ್. ಸತೀಶ್, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪೂರ್ಣ, ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್. ಪುಷ್ಪ, ಬಿ.ಆರ್.ಸಿ. ಎಂ.ವಿ. ಮಂಜೇಶ್, ಸಂಸ್ಥೆಯ ಉಪನ್ಯಾಸಕ ವಿ. ವಿಜಯ್, ಕೆ.ಎಸ್. ನಳಿನಾಕ್ಷಿ, ಪಿ.ಪಿ. ಗಾಯತ್ರಿ, ಸಿಆರ್ ಪಿಗಳಾದ ಕೆ. ಶಾಂತ ಕುಮಾರ್, ಟಿ.ಈ. ವಿಶ್ವನಾಥ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಎಸ್.