ಶಾಸಕ ಎ.ಎಸ್. ಪೊನ್ನಣ್ಣ ವಿರುದ್ಧದ ಪ್ರಕರಣ: ಆರೋಪಗಳಿಂದ ಅಡ್ಡಂಡ ಕಾರ್ಯಪ್ಪ ಬಿಡುಗಡೆ

KannadaprabhaNewsNetwork |  
Published : Nov 05, 2026, 02:45 AM IST
ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ನಾಪೋಕ್ಲು ಶಾಖೆ ವತಿಯಿಂದ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಕ್ರೀಡಾಕೂಟ ನವಂಬರ್  25 ರಿಂದ  29 ರವರೆಗೆಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ನಾಪೋಕ್ಲು ಶಾಖೆ ವತಿಯಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಎಸ್ ಎನ್ ಡಿ ಪಿ ಶಾಖೆಯ ಅಧ್ಯಕ್ಷ ಟಿ ಸಿ ಲವ, ಎಸ್ ಎನ್ ಡಿ ಪಿ ಶಾಖೆಯಆಚರಣೆ ಸಮಿತಿ ಅಧ್ಯಕ್ಷ ರಾಜೀವ್ ಟಿ ಸಿ,  ಕಾರ್ಯದರ್ಶಿ ಶ್ರೀಧರ್, ಉಪಾಧ್ಯಕ್ಷ ತಂಗಾ , ಚಿನ್ನ ರಧೀಶ್  ಪದಾಧಿಕಾರಿಗಳು  ಹಾಗೂ ಸದಸ್ಯರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಚುನಾವಣಾ ಪ್ರಚಾರದ ವೇಳೆ ಎ.ಎಸ್. ಪೊನ್ನಣ್ಣ ಅವರ ವಿರುದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರನ್ನು ವಿರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಆರೋಪಗಳಿಂದ ಬಿಡುಗಡೆಗೊಳಿಸಿ ಆದೇಶಿಸಿದೆ.

ಸಿದ್ದಾಪುರ: ಚುನಾವಣಾ ಪ್ರಚಾರದ ವೇಳೆ ಎ.ಎಸ್. ಪೊನ್ನಣ್ಣ ಅವರ ವಿರುದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರನ್ನು ವಿರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಆರೋಪಗಳಿಂದ ಬಿಡುಗಡೆಗೊಳಿಸಿ ಆದೇಶಿಸಿದೆ.2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್ 30ರಂದು ಮಾಲ್ದಾರೆ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ, ಸ್ಪರ್ಧಾ ಅಭ್ಯರ್ಥಿಯಾಗಿದ್ದ ಎ.ಎಸ್. ಪೊನ್ನಣ್ಣ ಅವರು ಪಿಎಫ್‌ಐ ಸದಸ್ಯರ ಪರ ವಕಾಲತ್ತು ವಹಿಸುವುದರ ಜೊತೆಗೆ ದೇವಸ್ಥಾನಗಳಿಗೆ ದೇಣಿಗೆ ನೀಡುತ್ತಾರೆ ಎಂದು ಕಾರ್ಯಪ್ಪ ಹೇಳಿಕೆ ನೀಡಿದ್ದರು ಎಂಬುದು ಆರೋಪವಾಗಿತ್ತು. ಈ ಹೇಳಿಕೆಯು ಅಭ್ಯರ್ಥಿಯ ಪ್ರತಿಷ್ಠೆಗೆ ಧಕ್ಕೆ ತರುವುದರೊಂದಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ದೂರಲಾಗಿತ್ತು.ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171ಜಿ ಮತ್ತು 505(2) ಅಡಿಯಲ್ಲಿ ಪ್ರಕರಣ ದಾಖಲಿಸಿ, ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆರೋಪಗಳಿಂದ ಬಿಡುಗಡೆ ಕೋರಿ ವಿರಾಜಪೇಟೆ ವಕೀಲ ಪ್ರಶಾಂತ್ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 239ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಶ್ವನಾಥ್ ಎ. ಅವರು, ಆರೋಪಿತ ಹೇಳಿಕೆ ಉದ್ದೇಶಪೂರ್ವಕವಾಗಿ ಸುಳ್ಳಾಗಿತ್ತು ಅಥವಾ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವ ಉದ್ದೇಶ ಹೊಂದಿತ್ತು ಎಂಬುದಕ್ಕೆ ಸೂಕ್ತ ದಾಖಲೆಗಳಿಲ್ಲ ಎಂದು ಅಭಿಪ್ರಾಯಪಟ್ಟರು. ಅಲ್ಲದೆ, ವಿವಿಧ ಧರ್ಮ, ಜಾತಿ ಅಥವಾ ಸಮುದಾಯಗಳ ನಡುವೆ ದ್ವೇಷ ಬೆಳೆಸುವ ಉದ್ದೇಶವೂ ದಾಖಲೆಗಳಿಂದ ಸಾಬೀತಾಗಿಲ್ಲ ಎಂದು ತಿಳಿಸಿದರು.ಹೀಗಾಗಿ ಆರೋಪಗಳು ಆಧಾರರಹಿತವಾಗಿವೆ ಎಂದು ಪರಿಗಣಿಸಿ, ಕಾರ್ಯಪ್ಪ ಅವರ ಅರ್ಜಿಯನ್ನು ಅಂಗೀಕರಿಸಿ ಅಕ್ಟೋಬರ್ 31ರಂದು ಬಿಡುಗಡೆ ಆದೇಶ ಹೊರಡಿಸಿದರು. ಕಾರ್ಯಪ್ಪ ಪರ ವಕೀಲ ಎನ್.ಎಸ್. ಪ್ರಶಾಂತ್ ಉಚಿತವಾಗಿ ವಾದ ಮಂಡಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ