)
-ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಇದೆ ಎಂಬ ಪೋಸ್ಟ್
ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಮಾಳವೀಯ ಮತ್ತು ಗೋಸ್ವಾಮಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
2025ರ ಮೇ 17ರಂದು ಅಮಿತ್ ಮಾಳವೀಯ ಅವರು ಎಕ್ಸ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು, ಟರ್ಕಿಯಲ್ಲಿ ಕಾಂಗ್ರೆಸ್ ಪಕ್ಷದ ನೋಂದಾಯಿತ ಕಚೇರಿ ಇದೆ ಎಂಬುದು ನಿಮಗೆ ತಿಳಿದಿದೆಯೇ, ಇದಕ್ಕೆ ಕಾರಣವೇನು ಎಂಬುದನ್ನು ರಾಹುಲ್ ಗಾಂಧಿ ವಿವರಿಸಬಹುದೇ, ಎಂದು ಅವರು ಪೋಸ್ಟ್ನಲ್ಲಿ ಬರೆದಿದ್ದರು. ಆ ಕುರಿತು ರಿಪಬ್ಲಿಕ್ ಟಿವಿ ಕಾರ್ಯಕ್ರಮದ ಡಿಜಿಟಲ್ ಆವೃತ್ತಿ ಪ್ರಕಟಿಸಿದ ಸುದ್ದಿಯಲ್ಲಿ ಇಸ್ತಾಂಬುಲ್ನ ಕಟ್ಟಡವೊಂದರ ಸಂಬಂಧವಿಲ್ಲದ ಚಿತ್ರವನ್ನು ತಪ್ಪಾಗಿ ಸೇರಿಸಲಾಗಿತ್ತು. ಇದು ವಿವಾದಕ್ಕೆ ಗುರಿಯಾದ ನಂತರದ ರಿಪಬ್ಲಿಕ್ ಟಿವಿ ತಿದ್ದುಪಡಿ ಪ್ರಕಟಣೆ ಹೊರಡಿಸಿತ್ತು.ಈ ಹಿನ್ನೆಲೆಯಲ್ಲಿ ಇಸ್ತಾಂಬುಲ್ ಕಾಂಗ್ರೆಸ್ ಸೆಂಟರ್ನ ಚಿತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಚೇರಿ ಎಂಬಂತೆ ಬಿಂಬಿಸಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಪದಾಧಿಕಾರಿ ಬಿ.ಎನ್.ಶ್ರೀಕಾಂತ್ ಸ್ವರೂಪ್ ದೂರು ನೀಡಿದ್ದರು. ದೂರು ಆಧರಿಸಿ ಗಲಭೆ ಉಂಟುಮಾಡುವ ಉದ್ದೇಶ ಹಾಗೂ ಶಾಂತಿಭಂಗಕ್ಕೆ ಪ್ರಚೋದಿಸುವ ಉದ್ದೇಶದಿಂದ ಅವಮಾನಿಸಿದ ಆರೋಪದ ಮೇಲೆ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.