ವಕೀಲರ ಮೇಲಿನ ಹಲ್ಲೆ ಪ್ರಕರಣ: ವಕೀಲರ ಪ್ರತಿಭಟನೆ

KannadaprabhaNewsNetwork |  
Published : Nov 04, 2026, 01:15 AM IST
ರಾಣಿಬೆನ್ನೂರು ನಗರದ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಸ್ಥಳೀಯ ನ್ಯಾಯವಾದಿಗಳು ಗೌರಿಬಿದನೂರ ಹಾಗೂ ವಿಜಯಪುರ ವಕೀಲರುಗಳ ಮೇಲೆ ನಡೆದ ಹಲ್ಲೆ ಖಂಡಿಸಿ ತಹಸೀಲ್ದಾರ ಆರ್.ಎಚ್.ಭಾಗವಾನ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ಗೌರಿಬಿದನೂರ ಹಾಗೂ ವಿಜಯಪುರ ವಕೀಲರಾದ ಸಣ್ಣಕ್ಕಿ ವೆಂಕಟರಮಣಪ್ಪ, ಪ್ರವೀಣ ಹುಡೆದಾಳ ಹಾಗೂ ಎಮ್.ಎಸ್. ರಾಣಗೋಳ ಇವರುಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಸ್ಥಳೀಯ ನ್ಯಾಯಾಲಯಗಳ ವಕೀಲರು ಮಂಗಳವಾರ ನಗರದ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ತಹಸೀಲ್ದಾರ್ ಆರ್.ಎಚ್.ಭಾಗವಾನ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ಗೌರಿಬಿದನೂರ ಹಾಗೂ ವಿಜಯಪುರ ವಕೀಲರಾದ ಸಣ್ಣಕ್ಕಿ ವೆಂಕಟರಮಣಪ್ಪ, ಪ್ರವೀಣ ಹುಡೆದಾಳ ಹಾಗೂ ಎಮ್.ಎಸ್. ರಾಣಗೋಳ ಇವರುಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಸ್ಥಳೀಯ ನ್ಯಾಯಾಲಯಗಳ ವಕೀಲರು ಮಂಗಳವಾರ ನಗರದ ಕೋರ್ಟ್ ಮುಂಭಾಗದ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ತಹಸೀಲ್ದಾರ್ ಆರ್.ಎಚ್.ಭಾಗವಾನ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕೀಲರ ಮೇಲೆ ಪದೇ ಪದೇ ಹಲ್ಲೆ, ದೌರ್ಜನ್ಯ, ಜೀವ ಬೆದರಿಕೆ ಹಾಗೂ ಅವಮಾನಕರ ಘಟನೆಗಳು ನಡೆಯುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಸಂಗತಿಯಾಗಿದೆ. ಸಮಾಜದಲ್ಲಿ ಕಾನೂನು ಮತ್ತು ವಕೀಲರು ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು ಜವಾಬ್ದಾರಿಯನ್ನು ನಿರ್ವಹಿಸಲು ಮತ್ತು ನ್ಯಾಯವನ್ನು ದೊರಕಿಸಿಕೊಡುವ ಉದ್ದೇಶದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ವಕೀಲ ಸಮುದಾಯದಲ್ಲಿ ಭಯ ಉಂಟು ಮಾಡುತ್ತಿದೆ. ವಕೀಲರು ಸ್ವತಂತ್ರವಾಗಿ ತಮ್ಮ ವೃತ್ತಿಯನ್ನು ಯಾವುದೇ ಭಯ, ಒತ್ತಡ ಹಾಗೂ ಬೆದರಿಕೆಗಳಿಲ್ಲದೆ ನಿರ್ವಹಿಸುವುದು ಅತ್ಯಂತ ಅವಶ್ಯಕವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಮೇಲಿಂದ ಮೇಲೆ ನಡೆಯುತ್ತಿರುವ ಹಲ್ಲೆ ಮತ್ತು ದೌರ್ಜನ್ಯಗಳಿಂದ ವಕೀಲಿ ವೃತ್ತಿಗೆ ಹಾಗೂ ವೈಯಕ್ತಿಕ ಸುರಕ್ಷತೆಗೆ ಧಕ್ಕೆಯಾಗುತ್ತಿದೆ. ವಕೀಲರ ಮೇಲೆ ನಡೆಯುವ ಹಲ್ಲೆಗಳು ಕೇವಲ ಒಬ್ಬ ವ್ಯಕ್ತಿಯ ಮೇಲಿನ ಹಲ್ಲೆಯಾಗಿರದೆ ವೃತ್ತಿಪರ ಸ್ವಾತಂತ್ರ‍್ಯದ ಮೇಲಿನ ದೌರ್ಜನ್ಯವಾಗಿದೆ. ಆದ್ದರಿಂದ ಸರ್ಕಾರವು ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ವಕೀಲರ ರಕ್ಷಣೆಗೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಅವಶ್ಯಕವಾಗಿರುತ್ತದೆ. ರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಜೀವ ಬೆದರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವಕೀಲರು ನಿರ್ಭಯವಾಗಿ ತಮ್ಮ ವೃತ್ತಿಯನ್ನು ನಿರ್ವಹಿಸಲು ಸೂಕ್ತ ಪೊಲೀಸ್ ರಕ್ಷಣೆ ಹಾಗೂ ಸುರಕ್ಷತಾ ವ್ಯವಸ್ಥೆಯನ್ನು ಕಲ್ಪಿಸಬೇಕು. ವಕೀಲರ ಮೇಲಿನ ಹಲ್ಲೆಗಳನ್ನು ತಡೆಗಟ್ಟುವ ಉದ್ದೇಶದಿಂದ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ಟನ್‌ ಕಬ್ಬಿಗೆಗೆ ₹3600 ಫಿಕ್ಸ್‌
ವೈದ್ಯಕೀಯ ಶಿಕ್ಷಣದಲ್ಲಿ ರಚನಾ ಶರೀರ ಶಾಸ್ತ್ರ ಮೂಲಭೂತ ಅಂಶ: ಡಾ. ಮಹಾಬಲ ಶೆಟ್ಟಿ