ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗುರುವಾರ ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು, 20 ವರ್ಷ ಶಾಸಕರಾಗಿದ್ದ ಅವಧಿಯಲ್ಲಿ ರಸ್ತೆ ಕಾಮಗಾರಿ ನಡೆಸದೇ, ಇದೀಗ ಕಾಂಗ್ರೆಸ್ ಸರ್ಕಾರ ರಸ್ತೆ ಕಾಮಗಾರಿ ಮಾಡುತ್ತಿದೆ. ಈಗ ಏಕೆ ಇಲ್ಲಿಗೆ ಬಂದಿದ್ದೀರಾ ಎಂದು ನಡು ರಸ್ತೆಯಲ್ಲಿ ಪ್ರಶ್ನಿಸಿದ್ದಲ್ಲದೇ, ಸಿ.ಟಿ.ರವಿ ಹಾಗೂ ಬಿಜೆಪಿ ವಿರುದ್ಧ ಧಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ, ಒಂದು ಹಂತದಲ್ಲಿ ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಹರ ಸಾಹಸ ಪಡಬೇಕಾಯಿತು. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಂತಿ ಭಂಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಗುಪ್ತ ಮಾಹಿತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆ ಪ್ರವೀಣ್ ನೀಡಿರುವ ದೂರು ಆಧಾರಿಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಆರೋಪದಡಿ ಪೊಲೀಸರು ಒಟ್ಟು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಫೋಟೋ: ಸಂತೋಷ್ ಕೋಟ್ಯಾನ್ ಫೋಟೋ ಇದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಖಂಡನೆ
ರಾಜ್ಯದಲ್ಲಿ ಕಾನೂನು ಸೂವ್ಯವಸ್ಥೆ ಎಷ್ಟರ ಮಟ್ಟಿಗೆ ಹಾಳಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯರ ಮೇಲೆಯೇ ಗೂಂಡಾ ವರ್ತನೆ ತೋರುವಷ್ಟು ಕಾನೂನು ಸುವ್ಯವಸ್ಥೆ ಹದಗೆಡಿಸಿರುವ ಕಾಂಗ್ರೆಸ್ ದುರಾಡ ಳಿತ, ಜನ ಸಾಮಾನ್ಯರಿಗೆ ಎನು ಸುರಕ್ಷತೆ ನೀಡುವುದಕ್ಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ವಿಧಾನಪರಿಷತ್ ಸದಸ್ಯರ ಮೇಲೆ ಗೂಂಡಾ ವರ್ತನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಬಿಜೆಪಿ ಕಾರ್ಯಕರ್ತರೊಂದಿಗೆ ಜನರು ಬೀದಿಗಿಳಿದು ಹೋರಾಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.