ರಮೇಶ್ ಕತ್ತಿಯ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ

KannadaprabhaNewsNetwork |  
Published : Oct 26, 2025, 02:00 AM IST
ಪೋಟೋ ಶೀರ್ಷಿಕೆ 25ಎಸ್‌ವಿಆರ್‌01ಸವಣೂರ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಸವಣೂರು ಘಟಕ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಯುವ ಕ್ಷೇಮಾಭಿವೃದ್ಧಿ ಸಂಘ ವಾಲ್ಮೀಕಿ ಯುವ ಘಟಕ ಸವಣೂರು ನೇತೃತ್ವದಲ್ಲಿ ಶುಕ್ರವಾರ ಸವಣೂರು ತಹಶೀಲ್ದಾರ್ ರವಿಕುಮಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ವಾಲ್ಮೀಕಿ ಸಮುದಾಯವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ರಮೇಶ್ ಕತ್ತಿಯ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಸವಣೂರು ತಹಸೀಲ್ದಾರ್ ರವಿಕುಮಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸವಣೂರ: ವಾಲ್ಮೀಕಿ ಸಮುದಾಯವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ರಮೇಶ್ ಕತ್ತಿಯ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಸವಣೂರು ಘಟಕ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಯುವ ಕ್ಷೇಮಾಭಿವೃದ್ಧಿ ಸಂಘ ವಾಲ್ಮೀಕಿ ಯುವ ಘಟಕ ನೇತೃತ್ವದಲ್ಲಿ ಶುಕ್ರವಾರ ಸವಣೂರು ತಹಸೀಲ್ದಾರ್ ರವಿಕುಮಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಕ್ಟೋಬರ್ 10ರಂದು ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ರಮೇಶ್ ಕತ್ತಿ ವಾಲ್ಮೀಕಿ ಸಮುದಾಯ ಕುರಿತು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ರಾಜ್ಯಾದ್ಯಂತ ಸುಮಾರು 75 ಲಕ್ಷ ಜನಸಂಖ್ಯೆ ಹೊಂದಿರುವ ವಾಲ್ಮೀಕಿ ಸಮುದಾಯವನ್ನು ಅವಮಾನಿಸಿದ್ದಾರೆ. ಇದೊಂದು ತೀವ್ರ ಆಘಾತಕಾರಿ ಬೆಳವಣಿಗೆಯಾಗಿದ್ದು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಡುವ ಸಂಭವವಿದೆ. ಹುಕ್ಕೇರಿ ವಿದ್ಯುತ್ ಮಂಡಳಿ ಚುನಾವಣೆ ಸಂದರ್ಭದಿಂದಲೂ ಇವರು ಸಮಾಜದಲ್ಲಿ ಮೇಲು-ಕೀಳು ಎಂಬ ಭಾವನೆ ಬಿತ್ತುವ ಮೂಲಕ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸತತವಾಗಿ ದಲಿತ ಸಮುದಾಯಗಳ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇವರ ಮೇಲೆ ಕೂಡಲೇ ದಲಿತ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರು ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ವಾಲ್ಮೀಕಿ ಮಹಾಸಭಾ ಜಿಲ್ಲಾ ಅಧ್ಯಕ್ಷ ರಮೇಶ್ ಆನವಟ್ಟಿ, ತಾಲೂಕು ಅಧ್ಯಕ್ಷ ನಾಗಪ್ಪ ತಿಪ್ಪಕ್ಕನವರ್, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಡೊಂಬರಮತ್ತೂರ, ತಾಲೂಕು ಯುವ ಘಟಕ ಅಧ್ಯಕ್ಷ ನಾಗರಾಜ್ ವಾಲ್ಮೀಕಿ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಓಲೆಕಾರ, ಮುಖಂಡರಾದ ಉಡಚಪ್ಪ ಬಡಲಿಂಗಪ್ಪನವರ, ಪ್ರಕಾಶ್ ಬಾರ್ಕಿ, ಪಾಂಡಪ್ಪ ತಿಪ್ಪಕ್ಕನವರ, ಬಸಪ್ಪ ದೇವಗೇರಿ, ಚೆನ್ನಪ್ಪ ದೇವಗೇರಿ, ಮಾಂತೇಶ್ ತಳವಾರ, ಬಸವರಾಜ್ ಜಲ್ಲಾಪುರ, ಗಿರೀಶ್ ತಳವಾರ, ಮಂಜಪ್ಪ ಅತ್ತಿಗೇರಿ, ಫಕ್ಕಿರೇಶ್ ಭರಮ ನಾಯಕರ, ಪವಿತ್ರ ಮಂಟಗಣಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!