ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಬಾಲ ಭವನ ಸಭಾಂಗಣದಲ್ಲಿ ಶುಕ್ರವಾರ ಕಾಣೆಯಾದ ಮಕ್ಕಳ ಪತ್ತೆ ಕುರಿತು ಪೋಷಕರು ಹಾಗೂ ತನಿಖಾ ಪೊಲೀಸ್ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿ, ಮಕ್ಕಳು ಕಾಣೆಯಾದ ಪ್ರಕರಣಗಳ ಲಘುವಾಗಿ ಪರಿಗಣಿಸುವಂತಿಲ್ಲ. ಹೆತ್ತವರ ನೋವುಗಳ ಅರ್ಥ ಮಾಡಿಕೊಳ್ಳಬೇಕು. ಹೀಗೆ ಕಾಣೆಯಾದ ಮಕ್ಕಳು ಅಡ್ಡದಾರಿ ಹಿಡಿದು ಸಮಾಜ ಘಾತುಕರಾಗುವ ಅಪಾಯವಿದೆ ಎಂದರು.
ಕಾಣೆಯಾದ ಮಕ್ಕಳ ಪತ್ತೆ ಕಾರ್ಯವನ್ನು ಚುರುಕುಗೊಳಿಸಬೇಕು. ಪತ್ತೆ ಕಾರ್ಯದ ತನಿಖೆ ಪ್ರಗತಿ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಈ ಮೂಲಕ ಮಕ್ಕಳಿಗೆ ಬಾಲ್ಯವಿವಾಹ, ಪೋಕ್ಸೋ, ಮಾದಕ ವಸ್ತುಗಳ ನಿಷೇಧ ಕಾಯ್ದೆ ಕುರಿತು ಮಾಹಿತಿ ನೀಡಬೇಕು. ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಕಾಣೆಯಾದ ಮಕ್ಕಳ ಪತ್ತೆ ಕಾರ್ಯದ ವರದಿಯನ್ನು ಪಡೆದುಕೊಳ್ಳಲಿದೆ ಎಂದು ನ್ಯಾಯಾಧೀಶ ಎಂ.ವಿಜಯ್ ಹೇಳಿದರು.2021 ರಿಂದ 2024 ವರೆಗೆ ಜಿಲ್ಲೆಯಲ್ಲಿ 345 ಮಕ್ಕಳ ಕಾಣೆ ಪ್ರಕರಣಗಳು ಐಪಿಸಿ ಕಲಂ 363ರ ಅಡಿಯಲ್ಲಿ ದಾಖಲಾಗಿವೆ. ಇವುಗಳ ಪೈಕಿ 337 ಪ್ರಕರಣಗಳಲ್ಲಿ ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. 8 ಪ್ರಕರಣಗಳು ಬಾಕಿ ಇವೆ. ಇದೇ ಅವಧಿಯಲ್ಲಿ ಪೋಷಕರೊಂದಿಗೆ ಕಾಣೆಯದ 127 ಮಕ್ಕಳ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 124 ರ ಪ್ರಕರಣಗಳ ಪತ್ತೆ ಹಚ್ಚಲಾಗಿದ್ದು ಮೂರು ಬಾಕಿ ಇವೆ ಎಂದು ಸಂಬಂಧ ಪಟ್ಟ ತನಿಖಾ ಪೊಲೀಸರು ನ್ಯಾಯಾಧೀಶರಿಗೆ ವರದಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಸವಿತಾ, ಪೊಲೀಸ್ ವೃತ್ತ ನಿರೀಕ್ಷಕ ನಹೀಮ್ ಅಹಮದ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಬಸವರಾಜ್, ಗುರುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.