ಕಾಂಗ್ರೆಸ್‌ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ

KannadaprabhaNewsNetwork |  
Published : Oct 16, 2026, 02:00 AM IST
ನವಲಗುಂದ ಪಟ್ಟಣದ ಮೇಟಿ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ವಿಧಾನ ಪರಿಷತ್‌ ಪಶ್ಚಿಮ ಪದವೀಧರ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರವಾಗಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅಭ್ಯರ್ಥಿಯ ಗೆಲುವಿಗೆ ಸಾಕ್ಷಿಯಾಗಬೇಕು.

ನವಲಗುಂದ:

ವಿಧಾನ ಪರಿಷತ್‌ ಪಶ್ಚಿಮ ಪದವೀಧರ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರವಾಗಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅಭ್ಯರ್ಥಿಯ ಗೆಲುವಿಗೆ ಸಾಕ್ಷಿಯಾಗಬೇಕೆಂದು ಶಾಸಕ ಎನ್.ಎಚ್‌. ಕೋನರಡ್ಡಿ ಮನವಿ ಮಾಡಿದರು.

ಗುರುವಾರ ಸ್ಥಳೀಯ ಮೇಟಿ ಭವನದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿವಾರು ಮುಖಂಡರ ಸಭೆ ಮಾಡಿ ಮಾತನಾಡಿದರು.

ನಂತರ ನವಲಗುಂದ ತಾಲೂಕು ವಕೀಲರ ಸಂಘದ ಸದಸ್ಯರುಗಳೊಂದಿಗೆ ಸಭೆ ಹಾಗೂ ಮತಯಾಚನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರ ಮತಯಾಚಿಸಲಾಯಿತು.

ವಿವಿಧ ಗ್ರಾಮಗಳಿಗೆ ಭೇಟಿ:

ಯಮನೂರ, ಆರೇಕುರಹಟ್ಟಿ, ಕಾಲವಾಡ, ಹೆಬಸೂರ, ಬ್ಯಾಹಟ್ಟಿ ಹಾಗೂ ಸುಳ್ಳ ಗ್ರಾಮದಲ್ಲಿ ಅಭ್ಯರ್ಥಿ ಮೋಹನ ಲಿಂಬಿಕಾಯಿ ಪರ ಮತಯಾಚಿಸಲಾಯಿತು. ​ಜಿಪಂ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಸ್.ಆರ್. ಪಾಟೀಲ ನವಲಗುಂದ ವಿಧಾನಸಭಾ ಕ್ಷೇತ್ರದ ಉಸ್ತುವಾರಿ, ಪಿ.ಕೆ. ನೀರಲಕಟ್ಟಿ, ನವಲಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡರ, ನವಲಗುಂದ ವಿಧಾನಸಭಾ ಯುವ ಕಾಂಗ್ರೆಸ್‌ ಅಧ್ಯಕ್ಷ ವಿಕಾಸ್ ತದ್ದೇವಾಡಿ, ಶಿವಾನಂದ ಭೂಮಣ್ಣವರ, ಎಂ.ಎಸ್‌. ರೋಣದ, ಉಸ್ಮಾನ್ ಬಬರ್ಚಿ, ಜೀವನ ಪವಾರ, ಮೋದಿನ ಶಿರೂರ, ಪ್ರಕಾಶ ಶಿಗ್ಲಿ, ಮಾಲತೇಶ ಹಂಚಿನಾಳ, ಪ್ರಕಾಶ ಹನಮರಡ್ಡಿ ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ.15ರ ವರೆಗೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಅಧ್ಯಕ್ಷ ಮಾಧವರೆಡ್ಡಿ ಆಗ್ರಹ
ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಪಾದ ಭಟ್ ಥಂಡಿಮನೆ ಅಸ್ತಂಗತ