ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗಿಸಬೇಕು: ತಹಸೀಲ್ದಾರ್ ಸಂತೋಷ್ ಕುಮಾರ್

KannadaprabhaNewsNetwork | Published : Mar 13, 2025 12:45 AM

ಸಾರಾಂಶ

ಶರಣಾಧಿ ಶರಣರು ವಚನಗಳು, ಕೃತಿಗಳು, ಸಾಹಿತ್ಯಗಳ ಮೂಲಕ ಸಮಾಜದ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ್ದಾರೆ. ಅವರ ಹಾದಿಯಲ್ಲಿಯೇ ಶ್ರೀರೇಣುಕಾಚಾರ್ಯರು ಸಹ ತಮ್ಮ ವಚನಗಳ ಮೂಲಕ ಸಮಾಜದ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದು ಕೆಲಸ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ರೇಣುಕಾಚಾರ್ಯ ಸೇರಿದಂತೆ ಶರಣರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಸಮಾಜದಲ್ಲಿ ಜಾತಿ ವ್ಯವಸ್ಥೆಯನ್ನು ತೊಲಗಿಸುವ ಕೆಲಸ ಮಾಡಬೇಕು ಎಂದು ತಹಸೀಲ್ದಾರ್ ಸಂತೋಷ್‌ಕುಮಾರ್ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ನಡೆದ ಶ್ರೀರೇಣುಕಾಚಾರ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ಶರಣರು ಜಾತಿ, ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ ಮಹಾನ್ ಪುರುಷರಾಗಿದ್ದಾರೆ ಎಂದರು.

ಶರಣಾಧಿ ಶರಣರು ವಚನಗಳು, ಕೃತಿಗಳು, ಸಾಹಿತ್ಯಗಳ ಮೂಲಕ ಸಮಾಜದ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ್ದಾರೆ. ಅವರ ಹಾದಿಯಲ್ಲಿಯೇ ಶ್ರೀರೇಣುಕಾಚಾರ್ಯರು ಸಹ ತಮ್ಮ ವಚನಗಳ ಮೂಲಕ ಸಮಾಜದ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದು ಕೆಲಸ ಮಾಡಿದ್ದಾರೆ ಎಂದರು.

ನಮ್ಮ ಸರ್ಕಾರಗಳು ಸಹ ಶರಣರು ಹೋರಾಡಿದ ದ್ಯೇಯ, ಉದ್ದೇಶಗಳನ್ನು ಸಾರ್ವಜನಿಕರು ಅರಿವು ಮೂಡಿಸಿಕೊಡಬೇಕೆಂಬ ಉದ್ದೇಶದಿಂದ ಶರಣರ ಜಯಂತಿ ಆಚರಣೆ ಮಾಡುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಇಂತಹ ಶರಣರ ಜಯಂತಿ ಕಾರ್‍ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಅರಿವು ಮೂಡಿಸಿಕೊಳ್ಳಬೇಕು ಎಂದರು.

ನಾವೆಲ್ಲರು ಜಾತಿ ವ್ಯವಸ್ಥೆ ತೊಲಗಿಸಬೇಕು. ವ್ಯಕ್ತಿಗಳನ್ನು ಜಾತಿಯಿಂದ ನೋಡುವುದನ್ನು ಬಿಟ್ಟು ಗೌರವದಿಂದ ನೋಡುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಆಗ ಸಮಾಜ ಸುಧಾರಣೆ ಜೊತೆಗೆ ನೆಮ್ಮದಿ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದರು.

ಸಮಾರಂಭದಲ್ಲಿ ಶಿರಸ್ತೇದಾರ ಮೋಹನ್ ಸೇರಿದಂತೆ ಹಲವರು ಹಾಜರಿದ್ದರು.

ಬಜೆಟ್‌ನಲ್ಲಿ ಸರ್ವ ಜನಾಂಗದವರ ಆಶೋತ್ತರಗಳಿಗೆ ಸ್ಪಂದನೆ

ಕನ್ನಡಪ್ರಭ ವಾರ್ತೆ ಮಂಡ್ಯ

2025-26ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್‌ನಲ್ಲಿ ಸರ್ವ ಜನಾಂಗದವರ ಆಶೋತ್ತರಗಳಿಗೆ ಸ್ಪಂದಿಸಿದ್ದಾರೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಕೆ.ಎನ್.ದೀಪಕ್‌ ಹೇಳಿದ್ದಾರೆ.ಸಿದ್ದರಾಮಯ್ಯನವರು ಎಲ್ಲಾ ಇಲಾಖೆಯ ಸಚಿವರು, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ರೈತರು, ಶೋಷಿತರು, ಅಲ್ಪಸಂಖ್ಯಾತ, ಹಿಂದುಳಿದವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ಮಠಾಧೀಶರೊಂದಿಗೆ ಸುದೀರ್ಘ ಸಭೆ ನಡೆಸಿ ಸಮಾಜದ ಎಲ್ಲಾ ಜಾತಿ ಜನಾಂಗ ವರ್ಗದ ಜನರ ಆಶೋತ್ತರಗಳನ್ನು ಆಲಿಸಿ ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಮಾಡಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬಜೆಟ್‌ನಲ್ಲಿ ಶಿಕ್ಷಣ, ಆರೋಗ್ಯ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭೀವೃದ್ಧಿ, ಕೃಷಿ, ಸಹಕಾರ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಸೇರಿದಂತೆ ಇನ್ನಿತರ ಐಟಿ, ಬಿಟಿ ಕ್ಷೇತ್ರಗಳಿಗೂ ಕೂಡ ವಿಶೇಷ ಮಾನ್ಯತೆ ನೀಡಲಾಗಿದೆ. ಶ್ರಮಿಕ ವರ್ಗಕ್ಕೆ ಹೆಚ್ಚಿನ ಕೊಡುಗೆ ಇದ್ದು, ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಮಹತ್ವ ನೀಡಿದೆ ಎಂದಿದ್ದಾರೆ.

ಅಲ್ಪಸಂಖ್ಯಾತರು ಎಂದರೆ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನರು, ಬೌದ್ಧರು, ಈ ಎಲ್ಲಾ ಸಮುದಾಯಗಳು ಬರುತ್ತವೆ. ರಾಜ್ಯದ ಬಜೆಟ್ ಗಾತ್ರ 4.9 ಲಕ್ಷ ಕೋಟಿ ರು.ಗಳಾಗಿದ್ದು, ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ 4500 ಕೋಟಿ ರು.ಗಳಾಗಿದೆ. ಇದನ್ನು ವಿರೋಧ ಪಕ್ಷದವರು ಅಲಾಲ್ ಬಜೆಟ್, ಓಲೈಕೆ ಬಜೆಟ್ ಎನ್ನುವ ಬಿಜೆಪಿ ನಾಯಕರಿಗೆ ಮಾನ- ಮರ್ಯಾದೆ ಇಲ್ಲವೆಂದು ಕಿಡಿಕಾರಿದ್ದಾರೆ.

Share this article