ಚಿರತೆ ದಾಳಿಗೆ ಜಾನುವಾರು ಬಲಿ: ಭಯಭೀತರಾದ ಗ್ರಾಮಸ್ಥರು

KannadaprabhaNewsNetwork |  
Published : Feb 02, 2026, 01:45 AM IST
ಚಿರತೆ ದಾಳಿಗೆ ಜಾನುವಾರು ಬಲಿ | Kannada Prabha

ಸಾರಾಂಶ

ಚಿರತೆ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ರೈತನಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.

ಹನೂರು: ಚಿರತೆ ದಾಳಿಗೆ ಜಾನುವಾರು ಬಲಿಯಾಗಿರುವ ಘಟನೆ ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಜರುಗಿದೆ. ರೈತ ಸುಮನ್ಸಸ್ ಅವರಿಗೆ ಸೇರಿದ ಜಾನುವಾರನ್ನು ಗ್ರಾಮದ ಸ್ಮಶಾನದ ಬಳಿ ಬರುವ ತಮ್ಮ ಜಮೀನಿನಲ್ಲಿ ಕಟ್ಟಿ ಹಾಕಿದ್ದಾಗ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ.

ಭಯಭೀತರಾದ ಗ್ರಾಮಸ್ಥರು: ವಿಚಾರ ತಿಳಿದ ಗ್ರಾಮಸ್ಥರು ಭಯಭೀತರಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅರಣ್ಯ ಅಧಿಕಾರಿಗಳು ಪರಿಶೀಲಿಸಿ ನಾಡಿನತ್ತ ಬರದಂತೆ ಚಿರತೆಯನ್ನು ಸೆರೆಹಿಡಿದು ಬೇರೆಡೆ ಬಿಡಬೇಕು, ಪ್ರಾಣಿಗಳನ್ನು ಕೊಂದು ತಿನ್ನುತ್ತಿರುವ ಚಿರತೆಯಿಂದ ಜನಸಾಮಾನ್ಯರ ಮೇಲೆ ತೊಂದರೆ ಆದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅರಣ್ಯಾಧಿಕಾರಿಗಳ ಭೇಟಿ: ಚಿರತೆ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ರೈತನಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ