ಸಾಮಾಜಿಕ ಜಾಲತಾಣಗಳಲ್ಲಿನ ಕೆಟ್ಟ ದೃಶ್ಯಗಳ ಬಗ್ಗೆ ಎಚ್ಚರ ಅಗತ್ಯ: ನ್ಯಾ.ಸಿ.ಎಂ.ಪಾರ್ವತಿ

KannadaprabhaNewsNetwork |  
Published : Nov 05, 2026, 01:45 AM IST
4ಕೆಎಂಎನ್ ಡಿ18 | Kannada Prabha

ಸಾರಾಂಶ

ಶಾಲೆಗಳಲ್ಲಿ ಶಿಕ್ಷಕರು ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರ ಹಾವಭಾವಗಳ ಬಗ್ಗೆಯೂ ಗಮನ ಹರಿಸಬೇಕು. ಅಪರಿಚಿತ ವ್ಯಕ್ತಿಗಳೊಂದಿಗೆ ಮಾತನಾಡುವುದನ್ನು ಕಂಡು ಬಂದರೆ ಮುಖ್ಯ ಶಿಕ್ಷಕರ ಮತ್ತು ಪೋಷಕ ಗಮನಕ್ಕೆ ತರಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೆಟ್ಟ ದೃಶ್ಯಗಳ ಕುರಿತು ವಿದ್ಯಾರ್ಥಿನಿಯರು ಎಚ್ಚರ ವಹಿಸಬೇಕು ಎಂದು ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಿ.ಎಂ.ಪಾರ್ವತಿ ಹೇಳಿದರು.

ಪಟ್ಟಣದ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಮತ್ತು ವಕೀಲರ ಸಂಘದ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ನಡೆದ ಸುರಕ್ಷಿತ್ ಬಚ್ ಪನ್ ಅಭಿಯಾನದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಹಾಗೂ ಲೈಂಗಿಕ ದೌರ್ಜನ್ಯ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ಹೆಣ್ಣು ಮಕ್ಕಳು ಶೈಕ್ಷಣಿಕ ಹಂತದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಶಿಕ್ಷಣಕ್ಕೆ ಪೂರಕ ಒಳ್ಳೆಯ ವಿಷಯಗಳನ್ನು ಮಾತ್ರ ಗಮನಿಸಬೇಕೆ ಹೊರತು ಕೆಟ್ಟ ದೃಶ್ಯಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಶಾಲೆಗಳಲ್ಲಿ ಶಿಕ್ಷಕರು ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರ ಹಾವಭಾವಗಳ ಬಗ್ಗೆಯೂ ಗಮನ ಹರಿಸಬೇಕು. ಅಪರಿಚಿತ ವ್ಯಕ್ತಿಗಳೊಂದಿಗೆ ಮಾತನಾಡುವುದನ್ನು ಕಂಡು ಬಂದರೆ ಮುಖ್ಯ ಶಿಕ್ಷಕರ ಮತ್ತು ಪೋಷಕ ಗಮನಕ್ಕೆ ತರಬೇಕು ಎಂದರು.

ಪುರುಷ ಪ್ರಧಾನ ಸಮಾಜದಲ್ಲಿ ಈ ಹಿಂದೆ ಹೆಣ್ಣು ಮಕ್ಕಳನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿತ್ತು. ಆಕೆಯನ್ನು ಕೇವಲ ಮನೆ ಕೆಲಸಕ್ಕೆ ಮಾತ್ರ ಸೀಮಿತಗೊಳಿಸಲಾಗುತ್ತಿತ್ತು. ಕಾಲ ಬದಲಾದಂತೆ ಆಕೆ ಪುರುಷರಿಗೆ ಸರಿ ಸಮಾನವಾದ ಬದುಕು ಕಟ್ಟಿಕೊಂಡು ನಿರ್ದಿಷ್ಟವಾದ ಗುರಿಯೊಂದಿಗೆ ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸುವ ಹಂತಕ್ಕೆ ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಬಿ.ಧನಂಜಯ ಮಾತನಾಡಿ, ಮಕ್ಕಳ ಸುರಕ್ಷತೆಗಾಗಿ ಸರ್ಕಾರ ರಕ್ಷಣಾ ನೀತಿ ಜಾರಿಗೆ ತಂದಿದೆ. 8 ರಿಂದ 10ನೇ ತರಗತಿವರೆಗೆ ಎಲ್ಲಾ ಶಾಲೆಗಳಲ್ಲಿ ಮಕ್ಕಳ ಸಹಾಯಕ ವಾಣಿಯ ಪ್ರಚುರಪಡಿಸುವ ಸಲಹಾ ಪೆಟ್ಟಿಗೆಯನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಶೈಕ್ಷಣಿಕ ಹಂತದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ ಅನಂತೇಗೌಡ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಸಲಹೆಗಾರರಾದ ವಕೀಲೆ ವಿಲಾಸಿನಿ ಮಕ್ಕಳ ಸುರಕ್ಷತೆ ಮತ್ತು ಲೈಂಗಿಕ ದೌರ್ಜನ್ಯ ಕುರಿತು ಉಪನ್ಯಾಸ ನೀಡಿದರು. ವಕೀಲರ ಸಂಘದ ಕಾರ್ಯದರ್ಶಿ ಎಂ. ಜೆ. ಸುಮಂತ್, ಕಾನೂನು ಸಲಹೆಗಾರ ಎಸ್.ಜಯರಾಮ, ಸಂಸ್ಥೆ ಕಾರ್ಯದರ್ಶಿ ಎಚ್.ಆರ್. ಅನಂತೇಗೌಡ, ಸಿಆರ್ ಪಿ ಹೇಮಲತಾ ಮತ್ತು ಶಿಕ್ಷಕ ವೃಂದದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಟಿಂಗ್ ಪ್ರಕರಣದಲ್ಲಿ ಎಚ್ಡಿಕೆ ತನಿಖೆಗೆ ಸಹಕರಿಸಲಿ
ಕಿತ್ತೂರು ತಾಲೂಕಿನ 4ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರೊ.ಜಿ.ಸಿ.ಕೋಟಗಿ ಸರ್ವಾಧ್ಯಕ್ಷ