ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಜಿಲ್ಲಾಡಳಿತದಿಂದ ಕೆಆರ್‌ಎಸ್ ಬೃಂದಾವನ ಉದ್ಯಾನವನದಲ್ಲಿ ಅ.16ರ ಶುಕ್ರವಾರ ಸಂಜೆ 6 ಗಂಟೆಗೆ ಕಾವೇರಿ ಆರತಿಗೆ ಚಾಲನೆ ದೊರೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಾಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾಸಂಸ್ಥಾನ ಮಠದ ಅಧ್ಯಕ್ಷ ಡಾ.ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿ, ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಮಹಾ ಸ್ವಾಮೀಜಿ, ಕೆಂಗೇರಿ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಕಲಬುರ್ಗಿ ಜಿಲ್ಲೆ ಕೊಡ್ಲಾ ಉರಿಲಿಂಗಪೆದ್ದೇಶ್ವರ ಮಹಾಸಂಸ್ಥಾನ ಮಠದ ಜಗದ್ಗುರು ಜ್ಞಾನಪ್ರಕಾಶ ಸ್ವಾಮೀಜಿ, ಮೈಸೂರು ಭಾಗದ ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠದ ಜಗದ್ಗುರು ಶಿವಾನಂದಾಪುರಿ ಸ್ವಾಮೀಜಿ ಅವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ ಎಂದರು.ಅ.16ರಂದು ಸಂಜೆ 6 ಗಂಟೆಗೆ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬೃಹತ್ ಮತ್ತು ಮಧ್ಯಮ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ, ಮುಜರಾಯಿ ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಉಪಸ್ಥಿತಿ ವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಜಿ.ಎಸ್, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರತೀಕ್ ಹೆಗ್ಡೆ, ಜಿಪಂ ಉಪ ಕಾರ್ಯದರ್ಶಿ ದರ್ಜೆ 2 ಪಿ.ಲಕ್ಷ್ಮಿ, ತಹಸೀಲ್ದಾರ್ ವಿಶ್ವನಾಥ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ್ ರವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.