ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ಮಾಡೇ ಮಾಡ್ತೀವಿ: ಮಂಡ್ಯದಲ್ಲಿ ಶಾಸಕ ರವಿಕುಮಾರ್ ಗಣಿಗ

KannadaprabhaNewsNetwork |  
Published : May 20, 2025, 01:10 AM IST
19ಕೆಎಂಎನ್‌ಡಿ-1ಮಂಡ್ಯದ ಜಿಪಂನ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ವಿಧಾನಸಭಾ ಕ್ಷೇತ್ರದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಿ.ರವಿಕುಮಾರ್‌ ಮಾತನಾಡಿದರು. | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಡಿಸುವುದು ನಮ್ಮ ಗುರಿ. ಹೋರಾಟ ಮಾಡುತ್ತೇವೆ ಎಂದು ಅಭಿವೃದ್ಧಿಗೆ ವಿರೋಧ ಮಾಡಬಾರದು. ಹೋರಾಟ ಮಾಡುವುದಾದರೆ ಮೇಕೆದಾಟು ವಿಚಾರದಲ್ಲಿ ಹೋರಾಟ ಮಾಡಲಿ. ಅಭಿವೃದ್ಧಿ ವಿಚಾರವಾಗಿ ಹೋರಾಟ ಮಾಡಲಿ. ಸುಖಾ ಸುಮ್ಮನೆ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್‌ಗೆ ವಿರೋಧ ಮಾಡುವುದರಲ್ಲಿ ಅರ್ಥವಿಲ್ಲ .

ಕನ್ನಡಪ್ರಭ ವಾರ್ತೆ ಮಂಡ್ಯ

ಕಾವೇರಿ ಆರತಿ, ಅಮ್ಯೂಸ್‌ಮೆಂಟ್‌ ಪಾರ್ಕ್‌ ಕೈಬಿಡುವ ಪ್ರಶ್ನೆಯೇ ಇಲ್ಲ. ಅವರೆಡನ್ನು ಮಾಡೇ ಮಾಡುತ್ತೇವೆ ಎಂದು ಶಾಸಕ ಪಿ.ರವಿಕುಮಾರ್‌ ಖಡಕ್ಕಾಗಿ ಹೇಳಿದರು. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತಸಂಘದವರು ಸುಮ್ಮನೆ ಎಲ್ಲದಕ್ಕೂ ವಿರೋಧ ಮಾಡುವುದು ಸರಿಯಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕಬಾರದು. ಯಾರೇ ವಿರೋಧ ಮಾಡಿದರೂ ಕಾವೇರಿ ಆರತಿಯನ್ನೂ ಮಾಡುತ್ತೇವೆ. ಅಮ್ಯೂಸ್‌ಮೆಂಟ್‌ ಪಾರ್ಕ್‌ಅನ್ನೂ ಜಾರಿಗೊಳಿಸುತ್ತೇವೆ ಎಂದು ನಿಷ್ಠುರವಾಗಿ ಹೇಳಿದರು.

ಅಮ್ಯೂಸ್‌ಮೆಂಟ್ ಪಾರ್ಕ್ ಮಾಡುವುದರಿಂದ ಸಾವಿರಾರು ಯುವಕರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ.

ಈಗಿನ ಮಾರುಕಟ್ಟೆ ದರದಲ್ಲೇ ರೈತರ ಜಮೀನನ್ನು ಕೊಂಡುಕೊಳ್ಳುತ್ತೇವೆ. ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸುವ ಭರವಸೆ ನೀಡಿದರು.

ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಡಿಸುವುದು ನಮ್ಮ ಗುರಿ. ಹೋರಾಟ ಮಾಡುತ್ತೇವೆ ಎಂದು ಅಭಿವೃದ್ಧಿಗೆ ವಿರೋಧ ಮಾಡಬಾರದು. ಹೋರಾಟ ಮಾಡುವುದಾದರೆ ಮೇಕೆದಾಟು ವಿಚಾರದಲ್ಲಿ ಹೋರಾಟ ಮಾಡಲಿ. ಅಭಿವೃದ್ಧಿ ವಿಚಾರವಾಗಿ ಹೋರಾಟ ಮಾಡಲಿ. ಸುಖಾ ಸುಮ್ಮನೆ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್‌ಗೆ ವಿರೋಧ ಮಾಡುವುದರಲ್ಲಿ ಅರ್ಥವಿಲ್ಲ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ