ಕನ್ನಡಪ್ರಭ ವಾರ್ತೆ ದೇವನಹಳ್ಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಕೆ.ಎಚ್. ಮುನಿಯಪ್ಪ ಅವರು ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ. ಎತ್ತಿನಹೊಳೆ, ಕಾವೇರಿ ನೀರನ್ನು ಈ ಭಾಗಕ್ಕೆ ಕೊಡಲೇಬೇಕು ಬೇಡಿಕೆ ಇಟ್ಟಿದ್ದಾರೆ. ಎಲ್ಲಾ ಸಂಪುಟ ಸಭೆಯಲ್ಲೂ ಕೂಡ ನೀರಿಗಾಗಿ ಮುನಿಯಪ್ಪ ಒತ್ತಡ ಹಾಕುತ್ತಿದ್ದಾರೆ. ಅವರ ಬೇಡಿಕೆಯನ್ನು ಈಡೇರಿಸುವ ಕೆಲಸ ಮಾಡಲಾಗುತ್ತದೆ ಎಂದರು.
ನಾನು ನೀರಾವರಿ ಸಚಿವ ಆದ ನಂತರ ಬೆಂಗಳೂರಿಗೆ 6 ಟಿಎಂಸಿ ನೀರನ್ನು ಪ್ರತ್ಯೇಕವಾಗಿ ಇಡಲು ನಾನು ಹೊಸ ಸರ್ಕಾರಿ ಆದೇಶ ಮಾಡಿದ್ದೇನೆ. 2002 ರಿಂದ 2004 ರಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ರಚನೆಗೆ ಸಹಿ ಮಾಡಿದೆ. ಬಿಡದಿಯಲ್ಲಿ ಅಥವಾ ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ ಆಗಬೇಕಾ ಎಂಬ ಚರ್ಚೆ ಆಗುತ್ತಿತ್ತು. ಆಗ ಮುಖಂಡರಾದ ಮುನನರಸಿಂಹಯ್ಯ, ರಾಮಯ್ಯ, ಬಚ್ಚೇಗೌಡ ಅವರು ಈ ಭಾಗದ ರೈತರನ್ನು ಒಪ್ಪಿಸಿ, ಇಲ್ಲಿ ಏರ್ಫೋಟ್ ಆಗಬೇಕು ಎಂದು ತೀರ್ಮಾನಿಸಲಾಯಿತು ಎಂದರು.ದೇವನಹಳ್ಳಿಯಲ್ಲಿ 2400 ಎಕರೆಯನ್ನು ಭೂಸ್ವಾಧೀನ ಮಾಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಲಾಗಿತ್ತು. ಇದಕ್ಕೆ ವಾಜಪೇಯಿ ಅವರನ್ನು ಕರೆದುಕೊಂಡು ಬಂದು ವಿಧಾನಸೌಧದಲ್ಲಿ ಭೂಮಿಪೂಜೆ ಮಾಡಲಾಯಿತು. ಈ ವಿಮಾನ ನಿಲ್ದಾಣದಿಂದ ಎಷ್ಟು ಜನರಿಗೆ ಉದ್ಯೋಗ ದೊರೆತಿದೆ, ಭೂಮಿಗೆ ಎಷ್ಟು ಬೆಲೆ ಬಂತು, ಎಷ್ಟು ಅಭಿವೃದ್ಧಿ ಆಯಿತು ಎಂಬುದು ಈ ಭಾಗದ ಜನತೆಗೆ ತಿಳಿದಿದೆ ಎಂದರು.
ಈ ಕುರಿತು ಮಾತನಾಡಿದ ಸಚಿವರು ಉಪಮುಖ್ಯಮಂತ್ರಿಗಳು ಕೂಡ ಗ್ರಾ.ಪಂ, ಬೂತ್ ಮಟ್ಟದಲ್ಲಿ ಹೊಸ ಹುರುಪನ್ನು ನೀಡಿದ್ದಾರೆ. ದೇವನಹಳ್ಳಿಯೂ ಅಭಿವೃದ್ದಿ ಹೊಂದುತ್ತಿದ್ದು, ಕೈಗಾರಿಕೋದ್ಯಮ ಹೆಚ್ಚಾಗುತ್ತಿದೆ. ಇದರಿಂದ ದೇವನಹಳ್ಳಿಗೆ ಮೆಟ್ರೋ ಸಂಪರ್ಕ ಅಗತ್ಯವಾಗಿದೆ. ದೇವನಹಳ್ಳಿಗೆ ಮೆಟ್ರೋ ಸಂಪರ್ಕವನ್ನು ಬಜೆಟ್‌ನಲ್ಲಿ ಸೇರಿಸಲಾಗಿದೆ. ಆದ? ಬೇಗ ಇದಕ್ಕೆ ಆದ್ಯತೆ ನೀಡಬೇಕು ಎಂದರು.
ಬಾಕ್ಸ್......
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದ ವೇದಿಕೆ ಸಮೀಪವೇ ಕಾರು ಧಗ ಧಗನೇ ಹೊತ್ತಿ ಉರಿದ ಘಟನೆ ನಡೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.