ನೆಲ್ಲಿತೀರ್ಥ: ಗುಹಾಪ್ರವೇಶ ಗುಹಾತೀರ್ಥ ಸ್ನಾನ ಆರಂಭ

KannadaprabhaNewsNetwork |  
Published : Oct 18, 2024, 12:05 AM IST
ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದಲ್ಲಿ  ಗುಹಾಪ್ರವೇಶ ಗುಹಾತೀರ್ಥ ಸ್ನಾನ | Kannada Prabha

ಸಾರಾಂಶ

ಗುಹಾಪ್ರವೇಶಕ್ಕೆ ಮುಂಚಿತವಾಗಿ ಕ್ಷೇತ್ರದ ನಾಗಪ್ಪ ಕೆರೆಯಲ್ಲಿ ಮಿಂದು ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಗುಹಾಪ್ರವೇಶ ಆರಂಭ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದಲ್ಲಿ ಪವಿತ್ರ ಗುಹಾಪ್ರವೇಶ ಗುಹಾತೀರ್ಥ ಸ್ನಾನ ಗುರುವಾರದಂದು ತುಲಾ ಸಂಕ್ರಮಣದಂದು ಆರಂಭವಾಯಿತು.

ಧಾರ್ಮಿಕ ಹಾಗೂ ಸಾಂಪ್ರದಾಯಿಕ ವಿಧಿಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬಗ್ಗಮಜಲು ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿಯವರ ನೇತೃತ್ವದಲ್ಲಿ ಶ್ರೀಜಗದ್ಗುರು ಮಧ್ವಾಚಾರ್ಯ ಸಂಸ್ಥಾನ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.

ಶ್ರೀ ಸೋಮನಾಥೇಶ್ವರ ಶ್ರೀ ಮಹಾಗಣಪತಿ ದೇವರು ಹಾಗೂ ಶ್ರೀ ಜಾಬಾಲಿ ಮಹರ್ಷಿ ಅವರ ಸನ್ನಿಧಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕಟೀಲು ದೇವಳದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ವಸಂತ ಭಟ್ ನೆಲ್ಲಿತೀರ್ಥ, ದೇಗುಲದ ಅರ್ಚಕ ಗಣಪತಿ ಭಟ್, ಅನಂತಕೃಷ್ಣ ಅಡಿಗ ಪುತ್ತಿಗೆ, ಎನ್.ವಿ. ವೆಂಕಟರಾಜ ಭಟ್, ಜಿ.ಕೆ. ಭಟ್, ಪ್ರಸನ್ನ ಭಟ್ ನೆಲ್ಲಿತೀರ್ಥ, ಆನಂದ ಕಾವ ಸಾಂತ್ರಬೈಲು, ಕೃಷ್ಣಪ್ಪ ಪೂಜಾರಿ, ಸುಂದರ ಪೂಜಾರಿ, ಹನುಮಂತ ಕಾಮತ್, ಸ್ಥಳೀಯ ಪ್ರಮುಖರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಗುಹಾಪ್ರವೇಶಕ್ಕೆ ಮುಂಚಿತವಾಗಿ ಕ್ಷೇತ್ರದ ನಾಗಪ್ಪ ಕೆರೆಯಲ್ಲಿ ಮಿಂದು ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಗುಹಾಪ್ರವೇಶ ಆರಂಭ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಆರ್‌ಎಸ್‌ನಿಂದಲೇ ನಗರಕ್ಕೆ ನೀರು ತರಲು ಸ್ಕೀಂ
ತರಕಾರಿಯಲ್ಲಿನ ಅಪಾಯಕಾರಿ ಅಂಶ ದೇಹಕ್ಕೆ ಸೇರದಿರಲು ಈ ಕ್ರಮ ಅನುಸರಿಸಿ ಸೇವಿಸಿ