ಕನ್ನಡಪ್ರಭ ವಾರ್ತೆ ಧಾರವಾಡ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಕ್ಯಾಬಿನೆಟ್ ಅಂದರೆ ಸರ್ಕಾರ ಇದ್ದಂತೆ. ಹೀಗಾಗಿ ಕ್ಯಾಬಿನೆಟ್ ನಿರ್ಣಯದ ಬಗ್ಗೆ ವಾದ-ವಿವಾದಗಳು ಸಾಮಾನ್ಯ. ಆದರೆ, ಸರ್ಕಾರ ತೆಗೆದುಕೊಂಡ ನಿರ್ಧಾರ ಅಂತಿಮ. ಕಾನೂನಿನಡಿಯಲ್ಲಿ ಮೇಲ್ಮನವಿಗೆ ಹೋದರೆ ಹೋಗಬಹುದು ಎಂದ ಅವರು, ಇದಕ್ಕಾಗಿ ಸಂಪುಟ ಸಭೆಯಲ್ಲಿ ಡಿಕೆಶಿ ಒತ್ತಡ ಹೇರಿದ್ದಾರೆ ಎಂಬ ಆರೋಪಕ್ಕೆ ಎಲ್ಲರೂ ಸೇರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಾನು ಸಭೆಯಲ್ಲಿ ಇರಲಿಲ್ಲ. ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಇದ್ದೇ. ಹೀಗಾಗಿ ಸಭೆಯ ನಿರ್ಣಯಗಳ ಬಗ್ಗೆ ಹೆಚ್ಚು ಮಾಹಿತಿ ಇಲ್ಲ ಎಂದರು ಸಂತೋಷ ಲಾಡ್.