ಹುಲಿ ಮರಿ ಸಾವಿನ ಸ್ಥಳ ಸಿಸಿಎಫ್‌ ತಂಡ ಭೇಟಿ

KannadaprabhaNewsNetwork |  
Published : Aug 14, 2025, 01:00 AM IST
13ಸಿಎಚ್‌ಎನ್54ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದ್ದ ಪ್ರಕರಣದ ಬೆನ್ನಲ್ಲೆ ಚಾಮರಾಜನಗರ ಸಿಸಿಎಫ್ ಹಿರೆಲಾಲ್ ನೇತೃತ್ವದ ತಂಡ ಆಗಮಿಸಿ ಮಾಹಿತಿ ಕಲೆ ಹಾಕಿದರು. | Kannada Prabha

ಸಾರಾಂಶ

ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದ್ದ ಪ್ರಕರಣದ ಬೆನ್ನಲ್ಲೆ ಚಾಮರಾಜನಗರ ಸಿಸಿಎಫ್ ಹಿರೆಲಾಲ್ ನೇತೃತ್ವದ ತಂಡ ಆಗಮಿಸಿ ಮಾಹಿತಿ ಕಲೆ ಹಾಕಿದರು.

ಕನ್ನಡಪ್ರಭ ವಾರ್ತೆ, ಹನೂರು

ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದ್ದ ಪ್ರಕರಣದ ಬೆನ್ನಲ್ಲೆ ಚಾಮರಾಜನಗರ ಸಿಸಿಎಫ್ ಹಿರೆಲಾಲ್ ನೇತೃತ್ವದ ತಂಡ ಆಗಮಿಸಿ ಮಾಹಿತಿ ಕಲೆ ಹಾಕಿದರು.

ಕಳೆದ ಜೂನ್ ತಿಂಗಳ ಅಂತ್ಯದಲ್ಲಿ ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಸಮೀಪದ ಗಾಜನೂರು ಸಮೀಪ ಐದುಹುಲಿ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದ ಪ್ರಕರಣವನ್ನು ಮನದಟ್ಟು ಮಾಡಿಕೊಂಡಿರುವ ಅರಣ್ಯ ಅಧಿಕಾರಿಗಳು ಕಾವೇರಿ ವನ್ಯಧಾಮದಲ್ಲಿ ಹುಲಿ ಮರಿಗಳು ಸಾವನ್ನಪ್ಪಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖಾ ಕಾರ್ಯ ಕೈಗೊಂಡಿದ್ದಾರೆ.

ಕಾವೇರಿ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ ಮಾತನಾಡಿ, ಕಾವೇರಿ ವನ್ಯಜೀವಿಧಾಮದಲ್ಲಿ ತಾಯಿ ಹುಲಿಯಿಂದ ಬೇರ್ಪಟ್ಟ ಹುಲಿ ಮರಿಗಳು ಸಾವನ್ನಪ್ಪಿರುವ ಬಗ್ಗೆ ಅವುಗಳ ಸಾವಿಗೆ ಕಾರಣ ತಿಳಿಯಬೇಕಾಗಿದೆ. ಶವ ಪರೀಕ್ಷೆಯ ಬಳಿಕ ಅದರ ಅಂಗಾಂಗವನ್ನು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಯೋಗಾಲಯದಿಂದ ವರದಿ ಬಂದ ಬಳಿಕ ಹುಲಿ ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಕೈಜೋಡಿಸಿ
ಹೊಲಗಳಲ್ಲಿ ಚರಗ ಚೆಲ್ಲಿ ಹಬ್ಬ ಆಚರಿಸಿದ ಅನ್ನದಾತರು