ನೇಮಕಾತಿ ಪರೀಕ್ಷೆಗೆ ಸಿಸಿಟೀವಿ ಕಡ್ಡಾಯ: ಸಿಎಂ

KannadaprabhaNewsNetwork |  
Published : Jul 26, 2026, 02:15 AM IST
ಡಿಕೆಶಿ | Kannada Prabha

ಸಾರಾಂಶ

ರಾಜ್ಯದಲ್ಲಿ ನೇಮಕಾತಿ ಪರ್ವ ನಡೆಯುತ್ತಿದೆ. ಸುಮಾರು 70 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇಮಕಾತಿ ಪರೀಕ್ಷೆ ನಡೆಯುವ ಕಡೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ/ಬೆಂಗಳೂರು:

ರಾಜ್ಯದಲ್ಲಿ ನೇಮಕಾತಿ ಪರ್ವ ನಡೆಯುತ್ತಿದೆ. ಸುಮಾರು 70 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇಮಕಾತಿ ಪರೀಕ್ಷೆ ನಡೆಯುವ ಕಡೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪ್ರಶ್ನೆಪತ್ರಿಕೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ಪರೀಕ್ಷೆ, ಪ್ರಶ್ನೆಪತ್ರಿಕೆ ತಯಾರಿಕೆ, ಹಂಚಿಕೆ... ಹೀಗೆ ಪ್ರತಿಯೊಂದು ಹಂತವೂ ದಾಖಲೆಯಾಗಬೇಕು. ನೀಟ್ ಹಗರಣ ಎಲ್ಲರ ಗಮನದಲ್ಲಿರಲಿ. ನೇಮಕಾತಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿದರು.

ಇದೇ ವೇಳೆ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸಿರುವ ಸಿಎಂ, ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ‘ದೇಶದ ಯುವಜನರು ತಮ್ಮ ಭವಿಷ್ಯವನ್ನು ಪಣಕ್ಕಿಟ್ಟ ಸಂದರ್ಭದಲ್ಲಿ ಜವಾಬ್ದಾರಿ ಮುಂದೂಡಲು ಸಾಧ್ಯವಿಲ್ಲ ಎಂಬುದನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಜೀನಾಮೆ ನೀಡುವ ಮೂಲಕ ತಡವಾಗಿಯಾದರೂ ಒಪ್ಪಿಕೊಂಡಂತಾಗಿದೆ’ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

‘ಧೈರ್ಯ ಮತ್ತು ದೃಢನಂಬಿಕೆಯಿಂದ ನ್ಯಾಯಕ್ಕಾಗಿ ನಿರಂತರವಾಗಿ ಹೋರಾಡಿದ ಪ್ರತಿಯೊಬ್ಬರಿಗೂ ಇಂದಿನ ದಿನ ಸೇರಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಧೈರ್ಯವಾಗಿ ನಿಂತ ನಮ್ಮ ವಿದ್ಯಾರ್ಥಿಗಳು ಮತ್ತು ಯುವಜನತೆಗೆ ನನ್ನ ಹೃತ್ಪೂರ್ವಕ ವಂದನೆಗಳು. ಹಾಗೆಯೇ, ಈ ಹೋರಾಟದ ಸಂಪೂರ್ಣ ಅವಧಿಯಲ್ಲಿ ಅವರೊಂದಿಗೆ ದೃಢವಾಗಿ ನಿಂತ ವಿರೋಧ ಪಕ್ಷದ ನಾಯಕರಾದ ರಾಹುಲ್‌ಗಾಂಧಿ ಹಾಗೂ ಸಂಪೂರ್ಣ ವಿರೋಧ ಪಕ್ಷಕ್ಕೂ ಅಭಿನಂದನೆಗಳು’ ಎಂದು ಅವರು ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.‘ನಮ್ಮ ಜವಾಬ್ದಾರಿ ಇಲ್ಲಿಗೇ ಮುಗಿಯುವುದಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯ ಕನಸುಗಳು ಮತ್ತು ಆಶಯಗಳಿಗೆ ತಕ್ಕಂತೆ ನ್ಯಾಯಸಮ್ಮತ, ಪಾರದರ್ಶಕ ಹಾಗೂ ವಿಶ್ವಾಸಾರ್ಹ ಶಿಕ್ಷಣ ವ್ಯವಸ್ಥೆ ನಿರ್ಮಿಸುವುದು ನಮ್ಮ ಮುಂದಿನ ಕರ್ತವ್ಯ’ ಎಂದು ಅವರು ಹೇಳಿದ್ದಾರೆ.ಆಗಸ್ಟ್‌ನಲ್ಲಿ ಅಧಿವೇಶನ:

ವಿಧಾನಸಭೆ ಅಧಿವೇಶನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಿಎಂ, ‘ಆಗಸ್ಟ್ 2ನೇ ವಾರ ಅಥವಾ 6ನೇ ತಾರೀಕು ವಿಧಾನಸಭೆಯ ಅಧಿವೇಶನ ನಡೆಯಬಹುದು. ಸೂಕ್ತ ದಿನಾಂಕ ನಿಗದಿಪಡಿಸಲು ಈಗಾಗಲೇ ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಲಾಗಿದೆ. ಶೀಘ್ರದಲ್ಲೇ ದಿನಾಂಕ ತೀರ್ಮಾನವಾಗಲಿದೆ. ಎಸ್‌ಐಆರ್ ಕಾರಣದಿಂದಾಗಿ ಅಧಿವೇಶನ ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಈಗ ಎಸ್‌ಐಆರ್‌ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ’ ಎಂದಿದ್ದಾರೆ.ಸಭೇಲಿ ಕಾವೇರಿ ಬಗ್ಗೆಯೂ ಸಮಾಲೋಚನೆ:

ಸಂಸದರ ಸಭೆಯಲ್ಲಿ ಕಾವೇರಿ ನೀರಿನ ಬಗ್ಗೆಯೂ ಚರ್ಚಿಸಲಾಗುವುದು ಎಂದು ಸಿಎಂ ತಿಳಿಸಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲು ಆಗುವುದಿಲ್ಲ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ಮುಂದೆ ಹೇಳಲಾಗಿದೆ. ಅವರಿಗೂ ಪರಿಸ್ಥಿತಿ ಬಗ್ಗೆ ಅರಿವಿದೆ. ಪ್ರಧಾನಿ ಮೋದಿ ಅವರು ಸಹ ಎಲ್ ನೀನೋ ಪರಿಣಾಮ ಬಗ್ಗೆ ಮಾತನಾಡಿದ್ದಾರೆ. ಈ ಎಚ್ಚರಿಕೆಯನ್ನು ನಾವು ಕಡೆಗಣಿಸಬಾರದು ಎಂದರು. ನಾನೂ ಸಹ ಪ್ರಧಾನಿಯವರಿಗೆ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಉಪಮುಖ್ಯಮಂತ್ರಿ ಅವರೂ ಬರದ ಬಗ್ಗೆ ವಸ್ತುಸ್ಥಿತಿ ತಿಳಿಸಲು ಪ್ರಧಾನಿಯವರ ಬಳಿ ಶೀಘ್ರ ನಿಯೋಗ ಕಳುಹಿಸಲಿದ್ದಾರೆ. ನಾವು ಎಲ್ಲಾ ಪಕ್ಷಗಳು ಒಂದಾಗಿ ಸರ್ವ ಪಕ್ಷ ನಿಯೋಗ ತೆರಳುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಹೇಳಿದರು.ಬರ ಸ್ಥಿತಿ ವಿವರಣೆಗೆ ಸರ್ವಪಕ್ಷ ನಿಯೋಗ:

ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರದ ಬಳಿ ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲಾಗುವುದು. ಈ ಸಂಬಂಧ ದೆಹಲಿಯಲ್ಲಿ ಸೋಮವಾರ ಸಂಸದರ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಬರಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಶನಿವಾರ ಚಿತ್ರದುರ್ಗ ಜಿಲ್ಲೆ ಹಿರಿಯೂರಿಗೆ ಆಗಮಿಸಿದ ಸಿಎಂ, ಹಿರಿಯೂರು ತಾಲೂಕಿನ ಯರಬಳ್ಳಿ ಹಾಗೂ ತಾಳವಟ್ಟಿ ಗ್ರಾಮದಲ್ಲಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಈಶ್ವರ್ ಖಂಡ್ರೆ ಈ ವೇಳೆ ಉಪಸ್ಥಿತರಿದ್ದರು.ಬಳಿಕ, ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಅವರು ಎಲ್ ನೀನೋ ಪರಿಣಾಮದ ಬಗ್ಗೆ ಮಾತನಾಡಿದ್ದಾರೆ. ಈ ಎಚ್ಚರಿಕೆಯನ್ನು ನಾವು ಕಡೆಗಣಿಸಬಾರದು. ನಾನೂ ಪ್ರಧಾನಿಯವರಿಗೆ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಬರದ ಬಗ್ಗೆ ವಸ್ತುಸ್ಥಿತಿ ತಿಳಿಸಲು ಡಿಸಿಎಂ ಅವರು ಪ್ರಧಾನಿಯವರ ಬಳಿಗೆ ಶೀಘ್ರವೇ ನಿಯೋಗವೊಂದನ್ನು ಕಳುಹಿಸಲಿದ್ದಾರೆ ಎಂದರು.ರಾಜ್ಯದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಮತ್ತು ವಿವಿಧ ಪ್ರಾದೇಶಿಕ ವಿಚಾರಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಪರಿಸ್ಥಿತಿ ಪರಿಶೀಲಿಸಲು ಶೀಘ್ರದಲ್ಲೇ ಕೇಂದ್ರದ ತಂಡ ಆಗಮಿಸುವ ನಿರೀಕ್ಷೆ ಇದೆ ಎಂದರು.ಕುಡಿವ ನೀರು ಹಾಗೂ ಬರ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಜಿಲ್ಲಾಡಳಿತದ ಬಳಿ ಸಾಕಷ್ಟು ಅನುದಾನ ಲಭ್ಯವಿದೆ. ಬೆಳಗಾವಿ ಅಧಿವೇಶನದಲ್ಲಿ ತೆಗೆದುಕೊಂಡ ಐತಿಹಾಸಿಕ ತೀರ್ಮಾನದಂತೆ ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಸಕರ ಅಧ್ಯಕ್ಷತೆಯ ಸಭೆಗಳಲ್ಲಿ 1 ಕೋಟಿ ರು.ವರೆಗೆ ವೆಚ್ಚ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಆಗಸ್ಟ್‌ನಲ್ಲಿ ಅಧಿವೇಶನ:ವಿಧಾನಸಭೆ ಅಧಿವೇಶನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆಗಸ್ಟ್ 2ನೇ ವಾರ ಅಥವಾ 6ನೇ ತಾರೀಕು ವಿಧಾನಸಭೆಯ ಅಧಿವೇಶನ ನಡೆಯಬಹುದು. ಸೂಕ್ತ ದಿನಾಂಕ ನಿಗದಿಪಡಿಸಲು ಈಗಾಗಲೇ ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಲಾಗಿದೆ. ಶೀಘ್ರದಲ್ಲೇ ದಿನಾಂಕ ತೀರ್ಮಾನವಾಗಲಿದೆ. ಎಸ್‌ಐಆರ್ ಕಾರಣದಿಂದಾಗಿ ಅಧಿವೇಶನ ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಈಗ ಎಸ್‌ಐಆರ್‌ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ ಎಂದರು.ವದ್ದೀಕೆರೆ ಸಿದ್ದೇಶ್ವರಸ್ವಾಮಿ ದೇಗುಲಕ್ಕೆ ಭೇಟಿ:ಬರ ಪರಿಶೀಲನೆಗೆ ಆಗಮಿಸಿದ್ದ ಸಿಎಂ, ಹಿರಿಯೂರು ತಾಲೂಕಿನ ಇತಿಹಾಸ ಪ್ರಸಿದ್ಧ ವದ್ದೀಕೆರೆ ಸಿದ್ದೇಶ್ವರಸ್ವಾಮಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ, ದೇವಸ್ಥಾನದ ಜೀರ್ಣೋದ್ದಾರಕ್ಕೆ 25 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಗ್ರಾಮಸ್ಥರು ಸಿಎಂಗೆ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಸೋರಿಕೆ ಮರುಕಳಿಸದಂತೆ ಕಠಿಣ ಕ್ರಮ: ಜೋಶಿ
ಬರಗಾಲದ ಬೇಗೆಯಲ್ಲಿ ತೋಟಗಾರಿಕೆ ಬೆಳೆಗಾರರು ಕಂಗಾಲು