ದೊಡ್ಡಬಳ್ಳಾಪುರ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಸೇರಿದಂತೆ, ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ, ನಗದು ವಹಿವಾಟುಗಳ ಪಾರದರ್ಶಕತೆ ಕಾಪಾಡಲು ಸಿಸಿಟಿವಿ ವೆಬ್ ಕ್ಯಾಮರಾ ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ತಿಳಿಸಿದರು.ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ನಡೆದ ದೇವಾಲಯಗಳ ಹುಂಡಿಗಳ ಭದ್ರತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ದೇವಾಲಯದಲ್ಲಿ ಅಳವಡಿಸುವ ಹುಂಡಿಗಳಿಗಳು ನಾಲ್ಕು ದಿಕ್ಕಿನಿಂದ ಕಾಣುವಂತೆ ಅಗತ್ಯವಾದ ಸಿಸಿ ಟಿವಿ, ವೆಬ್ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಿ ಧಾರ್ಮಿಕ ದತ್ತಿ ಇಲಾಖೆ ಮೇಲ್ವಿಚಾರಣೆ ನಡೆಸುವುದು. ಜೊತೆಗೆ ವೆಬ್ ಕ್ಯಾಮರಾ ಭದ್ರತೆ ದೃಷ್ಟಿಯಿಂದ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು, ಪೊಲೀಸ್ ಠಾಣೆ ಕಚೇರಿಗಳಿಗೆ ದೇವಾಲಯಗಳ ವೆಬ್ ಕ್ಯಾಮರಾ ಸಂಪರ್ಕ ಕಲ್ಪಿಸಿ ವೀಕ್ಷಣೆ ಮಾಡುವುದು ಅಗತ್ಯ. ನಗದು ಕಳ್ಳತನ ತಪ್ಪಿಸಲಕ ಡಿಜಿಟಲ್ ಪಾವತಿಗೆ ಹೆಚ್ಚಿನ ಉತ್ತೇಜನ ನೀಡಲು ಕ್ಯೂ ಆರ್ ಕೋಡ್ ಅಳವಡಿಸಿ ಜೊತೆಗೆ ಅದರ ಅಡಿಯಲ್ಲಿ ಸಂಬಂಧಪಟ್ಟ ಬ್ಯಾಂಕ್ ವಿವರಗಳನ್ನು ಅಳವಡಿಸಬೇಕು ಎಂದರು.
ಹುಂಡಿ ಎಣಿಕೆಗೆ ಸಾರ್ವಜನಿಕರಿಗೆ ಅವಕಾಶವಿಲ್ಲ:ಹುಂಡಿ ಎಣಿಕೆಗೆ ಸಾರ್ವಜನಿಕರ ಸೇವೆಯನ್ನು ಪಡೆಯುವುದರ ಬದಲಿಗೆ ಕಡ್ಡಾಯವಾಗಿ ಗೃಹ ರಕ್ಷಕದಳ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ, ಸರ್ಕಾರಿ ನೌಕರರ ಸೇವೆಯನ್ನು ಪಡೆಯುವುದು. ಖಾಸಗಿ ಅಥವಾ ಸಾರ್ವಜನಿಕರ ಸೇವೆಯನ್ನು ಹುಂಡಿ ಎಣಿಕೆಗೆ ಪಡೆಯಲು ಅವಕಾಶವಿಲ್ಲ. ಹುಂಡಿ ಎಣಿಕೆಯನ್ನು ಸಂಬಂಧಪಟ್ಟ ತಹಶೀಲ್ದಾರ್ ಮೇಲ್ವಿಚಾರಣೆ ನಡೆಸುವುದು. ಹುಂಡಿ ಎಣಿಕೆ ಸಂದರ್ಭದಲ್ಲಿ ಸ್ವೀಕೃತವಾಗುವ ಚಿನ್ನ, ಬೆಳ್ಳಿ ಇತರೆ ಬೆಲೆ ಬಾಳುವ ವಸ್ತುಗಳು ಸ್ವೀಕೃತವಾದಾಗ ಅಂತಹ ವಸ್ತುಗಳನ್ನು ಎಣಿಕೆ ದಿನದಂದೇ ಕಡ್ಡಾಯವಾಗಿ ಮೌಲ್ಯಮಾಪನ ಮಾಡಿಸಿ ಅಂದೇ ಸಂಬಂಧಪಟ್ಟ ಜಿಲ್ಲಾ ಉಪ ಖಜಾನೆಯಲ್ಲಿ ಜಮಾ ಮಾಡಬೇಕು. ಎಣಿಕೆಗೆ ಹಾಜರಿರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಖಚಿತ ಪಡಿಸಿಕೊಳ್ಳಲು ಫೇಸ್ ರೆಕಗ್ನಿಷನ್ ಅನ್ನು ಅಳವಡಿಸುವುದು ಮತ್ತು ಸಿಬ್ಬಂದಿ ಮತ್ತು ಅಧಿಕಾರಿಗಳು ಎಣಿಕೆಗೆ ಪ್ರವೇಶಿಸುವ ಸಂದರ್ಭದಲ್ಲಿ ಕ್ಯಾಶ್ ಇನ್ ಹ್ಯಾಂಡ್ ಅನ್ನು ಘೋಷಿಸುವುದು ಕಡ್ಡಾಯವಾಗಿದೆ. ಹುಂಡಿ ತೆರೆಯುವುದರಿಂದ, ಹುಂಡಿ ಎಣಿಕೆ ಮಾಡಿ ಬ್ಯಾಂಕಿನವರಿಗೆ ಹಸ್ತಾಂತರಿಸುವವರೆಗೆ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣವನ್ನು ದಿನಾಂಕ ಮತ್ತು ಸಮಯ ದಾಖಲೆಯಾಗುವಂತೆ ಕಡ್ಡಾಯವಾಗಿ ಚಿತ್ರೀಕರಿಸಬೇಕು ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಎಂ.ವಿ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು ನಾಮದೇವ, ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ನೆಲಮಂಗಲ ತಹಶೀಲ್ದಾರ್ ಮಲ್ಲೇಶ್, ಹೊಸಕೋಟೆ ತಹಶೀಲ್ದಾರ್ ಶೀತಲ್, ಮುಜರಾಯಿ ತಹಶೀಲ್ದಾರ್ ಹೇಮಾವತಿ, ಜಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯ ಪ್ರವರ್ಗ ''''''''ಎ'''''''' ದೇವಾಲಯಗಳು:
2. ಶ್ರೀ ಗಂಗಾಧರೇಶ್ವರಸ್ವಾಮಿ ಮತ್ತು ಶ್ರೀ ಹೊನ್ನಾದೇವಿ ದೇವಾಲಯ, ಶಿವಗಂಗೆ, ನೆಲಮಂಗಲ ತಾಲೂಕು.
ಪ್ರವರ್ಗ ''''''''ಬಿ'''''''' ದೇವಾಲಯಗಳು
2. ಶ್ರೀ ವೆಂಕಟರಮಣಸ್ವಾಮಿ ದೇವಾಲಯ, ಮಹಿಮಾಪುರ, ನೆಲಮಂಗಲ ತಾಲೂಕು.
4. ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ,ತೇರಿನಬೀದಿ, ದೊಡ್ಡಬಳ್ಳಾಪುರ ಟೌನ್.
5. ಶ್ರೀ ಕತ್ತಿಮಾರಮ್ಮ ದೇವಾಲಯ, ಕೋಡಗುರ್ಕಿ, ದೇವನಹಳ್ಳಿ ತಾಲೂಕು.ಫೋಟೋ-
24ಕೆಡಿಬಿಪಿ1- ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ದೇವಾಲಯಗಳ ಹುಂಡಿಗಳ ಭದ್ರತೆ ಕುರಿತ ಸಭೆ ಜಿಲ್ಲಾಧಿಕಾರಿ ಡಾ.ಅನುರಾಧಾ ಅಧ್ಯಕ್ಷತೆಯಲ್ಲಿ ನಡೆಯಿತು.