ಸಿಡಿಸಿಸಿ ಬ್ಯಾಂಕ್ ರೈತರಿಗೆ ಅತ್ಯಂತ ಪ್ರಾಮಾಣಿಕ ಸೇವೆ ಒದಗಿಸುತ್ತಿದೆ: ಡಿ.ಎಸ್.ಸುರೇಶ್

KannadaprabhaNewsNetwork |  
Published : Nov 25, 2025, 02:00 AM IST
ತರೀಕೆರೆಯಲ್ಲಿ 72ನೇ  ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ | Kannada Prabha

ಸಾರಾಂಶ

ತರೀಕೆರೆಚಿಕ್ಕಮಗಳೂರು ಸಿಡಿಸಿಸಿ ಬ್ಯಾಂಕ್ ಯಾವುದೇ ತಾರತಮ್ಯ ಮಾಡದೆ ರೈತರಿಗೆ ಸಾಲಸೌಲಭ್ಯ ನೀಡುತ್ತಿದ್ದು, ಅತ್ಯಂತ ಪ್ರಾಮಾಣಿಕತೆಯಿಂದ ಸೇವೆ ಒದಗಿಸುತ್ತಿದೆ ಎಂದು ಮಾಜಿ ಶಾಸಕ, ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ತಿಳಿಸಿದರು.

- ತರೀಕೆರೆಯಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಚಿಕ್ಕಮಗಳೂರು ಸಿಡಿಸಿಸಿ ಬ್ಯಾಂಕ್ ಯಾವುದೇ ತಾರತಮ್ಯ ಮಾಡದೆ ರೈತರಿಗೆ ಸಾಲಸೌಲಭ್ಯ ನೀಡುತ್ತಿದ್ದು, ಅತ್ಯಂತ ಪ್ರಾಮಾಣಿಕತೆಯಿಂದ ಸೇವೆ ಒದಗಿಸುತ್ತಿದೆ ಎಂದು ಮಾಜಿ ಶಾಸಕ, ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ತಿಳಿಸಿದರು.ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಹಾಸನ ಹಾಲು ಒಕ್ಕೂಟ ಮತ್ತು ಸಹಕಾರ ಇಲಾಖೆ ಇವರ ಆಶ್ರಯದಲ್ಲಿ ನಡೆದ ಸಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಸಿಡಿಸಿಸಿ ಬ್ಯಾಂಕ್ ಸಂಪೂರ್ಣ ಡಿಜಿಟಲ್ ವ್ಯವಸ್ಥೆ ಹೊಂದಿದೆ. ಮತ್ತು ಯುಪಿಎ ವ್ಯವಸ್ಥೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ದಲ್ಲಿದೆ. ಉತ್ತಮ ಆಡಳಿತಕ್ಕೆ ಅತ್ಯುತ್ತಮ ಬ್ಯಾಂಕ್‌ ಎಂಬ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕ್‌ನಿಂದ ಪಡೆದಿದೆ. ನ.14 ರಿಂದ 20 ರವರೆಗೆ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದ ಕರ ಸಂಘಗಳ ಮೂಲ ಸೌಕರ್ಯಗಳಿಗೆ ಸಿಡಿಸಿಸಿ ಬ್ಯಾಂಕ್‌ನಿಂದ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಡಾ.ಜಿ.ಎಸ್.ಮಹಾಬಲ ಮಾತನಾಡಿ, ಸಹಕಾರ ಕ್ಷೇತ್ರಕ್ಕೆ 121 ವರ್ಷಗಳ ಇತಿಹಾಸವಿದೆ. ದೇಶದ ಆರ್ಥಿಕ ವ್ಯವಹಾರದಲ್ಲಿ ಸಹಕಾರ ಕ್ಷೇತ್ರ ಹೆಚ್ಚಿನ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು. ಸಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಆರ್.ಆನಂದಪ್ಪ ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ದೊಡ್ಡ ಮಟ್ಟದ ಸಾಲಸೌಲಭ್ಯ ನೀಡಲಾಗುತ್ತಿದೆ. ಸಹಕಾರ ಕ್ಷೇತ್ರ ಭದ್ರಗೊಳಿಸುವ ನಿಟ್ಟಿನಲ್ಲಿ ಚಿಂತನ ಮಂತನ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಿ.ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ₹೬೦೦೦ ಕೋಟಿ ಗಳಿಗೆ ಹೆಚ್ಚಿನ ಆರ್ಥಿಕ ವ್ಯವಹಾರ ನಡೆಸುತ್ತಿರುವ ಸಹಕಾರ ಸಂಘಗಳು ಜನರಿಗೆ ಆರ್ಥಿಕ ಶಕ್ತಿ ತಂದುಕೊಟ್ಟಿವೆ ಎಂದರು.ಈ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬಿ.ಸಿ.ಲೋಕಪ್ಪಗೌಡ, ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕಿ ಎಚ್.ಟಿ.ಆಶಾ, ಸಹಕಾರ ಸಂಘಗಳ ಉಪನಿಬಂಧಕಿ ಡಾ.ಡಿ.ಎಸ್.ತೇಜಸ್ವಿನಿ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಪಿ.ಶಶಿಕುಮಾರ್, ಟಿ.ಧನಪಾಲ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಯೋಗೀಶ್, ಶಿವ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಸ್.ಮಹೇಶ್ವರಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಎಲ್.ಎಸ್.ಶಿವಯೋಗಿ , ತರೀಕೆರೆ ಶಾಖಾ ವ್ಯವಸ್ಥಾಪಕ ನವೀನ್ ಹಾಗೂ ಇತರರು ಹಾಜರಿದ್ದರು.-

23ಕೆಟಿಆರ್.ಕೆ.8ಃ

ತರೀಕೆರೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ನೆರವೇರಿಸಿದರು. ಸಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಆರ್.ಆನಂದಪ್ಪ ಮತ್ತಿತರರು ಭಾಗವಹಿಸಿದ್ದರು.

PREV

Recommended Stories

ಸಿದ್ದರಾಮಯ್ಯ ಕಾಂಗ್ರೆಸ್‌ ಆಸ್ತಿ: ಡಿಕೆ - ಅವರ ಮಾತೇ ವೇದವಾಕ್ಯ : ಡಿಸಿಎಂ ಡಿ.ಕೆ.ಶಿವಕುಮಾರ್‌
ದಿಲ್ಲಿಯಲ್ಲಿ ಈಗ ಡಿಕೆಶಿ ಪರ ಆಪ್ತ ಶಾಸಕರ ಬಹಿರಂಗ ಲಾಬಿ!