- 125 ಡೆಸಿಬಲ್ ಶಬ್ದಕ್ಕಿಂತ ಮೇಲ್ಪಟ್ಟ ಪಟಾಕಿ ನಿಷೇಧ । ಹಸಿರು ಪಟಾಕಿ ಮಾತ್ರ ಸಿಡಿಸಲು ಸುಪ್ರೀಂ ಕೋರ್ಟ್ ಆದೇಶ
ಕನ್ನಡಪ್ರಭ ವಾರ್ತೆ ದಾವಣಗೆರೆ ದೀಪಾವಳಿ ಹಬ್ಬವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 20ರಂದು ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯುಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯ ಹದಗೆಡಿಸುತ್ತಿದೆ. ಆದ್ದರಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಮುಖ್ಯ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಹೆಚ್ಚು ಸದ್ದು ಹಾಗೂ ರಾಸಾಯನಿಕ ಹೊಗೆಯುಕ್ತ ಪಟಾಕಿಗಳನ್ನು ಸಿಡಿಸುವುದರಿಂದ ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟಾಗುತ್ತದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸರಳ ರೀತಿಯಲ್ಲಿ ಹಾಗೂ ಮಾಲಿನ್ಯ ರಹಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸಲು ಆದ್ಯತೆ ನೀಡಿ ಎಂದು ತಿಳಿಸಿ, ಕೆಲವು ಮುನ್ನೆಚ್ಚರಿಕೆ ಸೂಚನೆಗಳನ್ನೂ ನೀಡಿದ್ದಾರೆ.ಹಸಿರು ಪಟಾಕಿ ಗುರುತಿಸುವುದು ಹೇಗೆ?:
2. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು.
4. ಹಣತೆ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಅಪಾರ್ಟ್ಮೆಂಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ.
6. ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದಿರಿ. ಪಟಾಕಿಗಳನ್ನು ಖರೀದಿಸುವ ಹಸಿರು ಪಟಾಕಿಗಳ ಲೇಬಲ್‌ಗಳನ್ನು ಪರಿಶೀಲಿಸಿ ಖರೀದಿಸಬೇಕು.
8. ಪಟಾಕಿಗಳ ಸಿಡಿತದ ನಂತರ ಉತ್ಪತ್ತಿಯಾಗುವ ಘನತ್ಯಾಜ್ಯ ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಕಸವನ್ನು ವಿಲೇವಾರಿ ಮಾಡುವ ವಾಹನಗಳಿಗೆ ನೀಡಬೇಕು
10. ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಸ್ಫೋಟಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟ ನಿಷೇಧಿಸಲಾಗಿದೆ.
-ಫೋಟೋ: ಪಟಾಕಿಗಳು.
-16ಕೆಡಿವಿಜಿ32: ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ.