ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ನಗರದ ಬಂದೀಗೌಡ ಬಡಾವಣೆಯ ಶ್ರೀಕಾಲಭೈರವೇಶ್ವರ ದೇವಾಲಯದ ಆವರಣದಲ್ಲಿ ಶನಿವಾರ ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ವತಿಯಿಂದ ಗೌರಿ-ಗಣೇಶ ವ್ರತಾಚರಣೆ ಪ್ರಯುಕ್ತ ಆಯೋಜಿಸಿದ್ದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಉಚಿತ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಪಂ ವ್ಯಾಪ್ತಿಯ ಭಾಗ್ಯಮ್ಮ ಹಾಗೂ ಅವರ ಸ್ವ ಸಹಾಯ ಸಂಘದ ಮಹಿಳೆಯರು, ಕುಟುಂಬಸ್ಥರ ಸಹಕಾರದೊಂದಿಗೆ ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ತಯಾರಿಸಿ ಮನೆಮನೆಗೆ ತಲುಪಿಸುವ ವಿಶೇಷ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಕಾರ್ಯವು ಪರಿಸರ ಸಂರಕ್ಷಣೆ ಜೊತೆಗೆ ಮಹಿಳಾ ಸಬಲೀಕರಣ ಹಾಗೂ ಸ್ವಾವಲಂಬನೆಗೆ ಉತ್ತೇಜನ ನೀಡುವಂತಾಗಿದೆ ಎಂದರು.ವಿಶೇಷ ಚೇತನತೆಯನ್ನು ಹೊಂದಿರುವ ತಮ್ಮ ಮಗನೊಂದಿಗೆ ಕುಟುಂಬಸ್ಥರು ಆತ್ಮಸ್ಥೈರ್ಯದಿಂದ ಮುನ್ನಡೆಯುತ್ತಿದ್ದು, ಜೀವನದಲ್ಲಿ ಸಾಧನೆ ಮಾಡುವ ಮನೋಭಾವ ಹೊಂದಿದ್ದಾರೆ. ಪರಿಸರ ಸ್ನೇಹಿ ಗಣೇಶ ಮತ್ತು ಗೌರಿ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಶ್ಲಾಘಿಸಿದರು.
ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ ಬಳಿಕ ವಿಸರ್ಜನೆಯ ಸಂದರ್ಭದಲ್ಲಿ ಹೂವಿನ ಕುಂಡ, ಬಕೆಟ್ ಅಥವಾ ಸೂಕ್ತ ಪಾತ್ರೆಯಲ್ಲಿ ವಿಸರ್ಜಿಸಿ ಅದೇ ಮಣ್ಣಿನಲ್ಲಿ ಗಿಡಗಳನ್ನು ಬೆಳೆಸಬಹುದು. ನವಧಾನ್ಯ, ಬೀಜ ಗಣಪತಿ ಹಾಗೂ ತುಳಸಿಯಂತಹ ಸಸಿಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿಯೂ ಪರಿಸರ ಕಾಳಜಿ ಹಾಗೂ ಜವಾಬ್ದಾರಿಯುತ ನಾಗರಿಕತೆಯ ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಟ್ರಸ್ಟ್ ಕಾರ್ಯದರ್ಶಿ ಪುರುಷೋತ್ತಮನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ಟ್ರಸ್ಟ್ ಅಧ್ಯಕ್ಷ ವಿನಯ್ ಕುಮಾರ್ ನೇತೃತ್ವ ವಹಿಸಿದ್ದರು. ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಟ್ರಸ್ಟ್‌ನ ಹಿತೈಷಿಗಳು ಉಪಸ್ಥಿತರಿದ್ದರು.