ಬಾಲಕಾರ್ಮಿಕ ವಿರೋಧಿ ದಿನ ಅರ್ಥಪೂರ್ಣವಾಗಿ ಆಚರಿಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ

KannadaprabhaNewsNetwork |  
Published : Jun 10, 2025, 05:26 AM ISTUpdated : Jun 10, 2025, 05:27 AM IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಮಾತನಾಡಿದರು. | Kannada Prabha

ಸಾರಾಂಶ

ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕುರಿತು ಪ್ರಬಂಧ, ರಸಪ್ರಶ್ನೆ, ಭಿತ್ತಿಚಿತ್ರ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ವಿಜೇತ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಣೆ ಮಾಡಬೇಕು ಎಂದು ಸೂಚಿಸಿದರು.

ಹಾವೇರಿ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ವಿವಿಧ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಜೂ. 12ರಂದು ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದರು. ವಿವಿಧ ಸ್ಪರ್ಧೆ: ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕುರಿತು ಪ್ರಬಂಧ, ರಸಪ್ರಶ್ನೆ, ಭಿತ್ತಿಚಿತ್ರ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ವಿಜೇತ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಣೆ ಮಾಡಬೇಕು ಎಂದು ಸೂಚಿಸಿದರು.ತಾಲೂಕು ಮಟ್ಟದಲ್ಲಿ ಸಭೆ: ತಾಲೂಕು ಮಟ್ಟದಲ್ಲಿ ತಹಸೀಲ್ದಾರ್, ಕಾರ್ಮಿಕ ನಿರೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಸಿಡಿಪಿಒ, ತಾಲೂಕು ಆರೋಗ್ಯಾಧಿಕಾರಿ ಹಾಗೂ ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಖಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದರು. ನಿರಂತರ ಕಾರ್ಯಕ್ರಮ: ಜೂ. 13ರಿಂದ ಒಂದು ತಿಂಗಳ ಕಾಲ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನವನ್ನು ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ನಿರಂತರವಾಗಿ ಮಾಡಬೇಕು ಎಂದರು.ಪ್ರಮಾಣವಚನ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಶಾಲಾ- ಕಾಲೇಜು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕುರಿತು ಪ್ರಮಾಣವಚನ ಸ್ವೀಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಾಥಾ: ಬಾಲ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಾಲಾ- ಕಾಲೇಜು ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಜಾಥಾ ಆಯೋಜಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಡಂಗೂರ ಸಾರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ತರನ್ನುಮ ಬೆಂಗಾಲಿ ಅವರು ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ, ವಿವಿಧ ತಾಲೂಕುಗಳ ತಹಸೀಲ್ದಾರಗಳು, ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಯ ಮುತ್ತುರಾಜ ಮಾದರ ಸೇರಿದಂತೆ ಇತರರು ಇದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ