ಕೊಪ್ಪಳ:
ಜಿಲ್ಲಾಡಳಿತ ಭವನದಲ್ಲಿ ಮುಸ್ಲಿಂ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬದ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಜಿಲ್ಲೆಯಲ್ಲಿ ಕೋಮು ಗಲಭೆಗೆ ಅವಕಾಶ ನೀಡದೆ, ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಪ್ರಾಣಿಬಲಿ, ಅವುಗಳ ಸಾಗಾಟದ ಮೇಲೆ ನಿಗಾ ವಹಿಸಲು ಜಿಲ್ಲೆಯಲ್ಲಿ 16 ಚೆಕ್‌ಪೋಸ್ಟ್ ತೆರೆಯಲಾಗುವುದು. ಸೋಶಿಯಲ್ ಮೀಡಿಯಾದಲ್ಲಿ ಬರುವ ಯಾವುದೇ ಸುಳ್ಳು ಸುದ್ದಿ ನಂಬದೆ, ಅಂಥವುಗಳನ್ನು ನಮ್ಮ ಗಮನಕ್ಕೆ ತರಬೇಕು. ಈಗಾಗಲೇ ರೌಡಿಶೀಟರ್‌ಗಳ ಪರೇಡ್ ಮಾಡಲಾಗಿದೆ. ಜೂ. 6, 7ರಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಭಾರದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ. ಈಗಾಗಲೇ ಜಿಲ್ಲೆಯ ಪೊಲೀಸ್ ಠಾಣಾ ಹಂತಗಳಲ್ಲಿ ನಮ್ಮ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಬಕ್ರೀದ್ ಹಬ್ಬ ಆಚರಿಸಬೇಕು ಎಂದರು.ಮುಸ್ಲಿಂ ಸಮಾಜದ ಮುಖಂಡರು ಮಾತನಾಡಿ, ಬೆಳಗ್ಗೆ 9ರಿಂದ 10 ಗಂಟೆಗೆ ನಮಾಜ್ ನಡೆಯಲಿದೆ. ಹಬ್ಬ ಶಾಂತಿಯುತವಾಗಿ ಆಚರಿಸುತ್ತೇವೆ. ಕೊಪ್ಪಳದ ಈದ್ಗಾ ಮೈದಾನದಲ್ಲಿ ಹಬ್ಬದ ದಿನ ಹೆಚ್ಚಿನ ಜನರು ಸೇರುವುದರಿಂದ ನಗರಸಭೆ ವತಿಯಿಂದ ಸ್ವಚ್ಛತೆ ಕಾರ್ಯವಾಗಬೇಕು ಎಂದು ಹೇಳಿದರು.