ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಿ

KannadaprabhaNewsNetwork |  
Published : Sep 13, 2024, 01:35 AM IST
೧೨ಕೆಎಲ್‌ಆರ್-೧೩ಕೋಲಾರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿ ಅಕ್ರಂಪಾ? ಅಂತಿಮ ಹಂತದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಸೆ.೧೫ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಮ್ಮಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಅಕ್ರಂಪಾಷ ಹೇಳಿದರು.

ಕನ್ನಡಪ್ರಭ ವಾರ್ತೆ ಕೋಲಾರಸೆ.೧೫ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಮ್ಮಿಕೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಅಕ್ರಂಪಾಷ ಹೇಳಿದರು.ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮದ ಕುರಿತು ನಡೆದ ಅಂತಿಮ ಹಂತದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಸೆ.೧೫ ಮುಂಜಾನೆ ೯ ಗಂಟೆಗೆ ಜಿಲ್ಲೆಯ ಚಿಕ್ಕೊಡಹಳ್ಳಿ ಗ್ರಾಮದಿಂದ ವೆಂಕಟಾಪುರದ ವರೆಗೆ ಏಕಕಾಲಕ್ಕೆ ಮಾನವ ಸರಪಳಿ ಕಾರ್ಯಕ್ರಮ ಜರಗುತ್ತಿದ್ದು, ಕೋಲಾರ ತಾಲೂಕಿನಲ್ಲಿ ಮಾನವ ಸರಪಳಿ ಹಾದು ಹೋಗುತ್ತಿದ್ದು, ಪ್ರತಿ ಕಿ.ಮೀ.ಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಿ, ಮುಖ್ಯ ವೃತ್ತಗಳಲ್ಲಿ ತೋರಣ, ಬ್ಯಾನರ್ ಹಾಕಿಸಿ ಮಾನವ ಸರಪಳಿ ನಿರ್ಮಿಸಿ ೧೦೦ ಮೀ. ವ್ಯಾಪ್ತಿಯಲ್ಲಿ ಜನರನ್ನು ಸೇರಿಸಿ, ಸಂವಿಧಾನದ ಪೀಠಿಕೆ ಓದಿಸಿ, ರಾಷ್ಟ್ರಗೀತೆ ಹಾಡಿಸಬೇಕು ಎಂದು ಹೇಳಿದರು.ತಾಲೂಕಿನ ತಹಸೀಲ್ದಾರ್‌ರು ಮತ್ತು ತಾಪಂ ಇಒ ಒಳಗೊಂಡು ಸಂಪೂರ್ಣ ಯೋಜನೆ ಜೊತೆಗೆ ಸೂಕ್ಷ್ಮ ಯೋಜನೆ ತಯಾರಿಸಿ ಮಾನವ ಸರಪಳಿ ಹಾದುಹೋಗುವ ಗ್ರಾಮ ಸೇರಿದಂತೆ, ೧೦ ಕಿ. ಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗ್ರಾಮ ಸಭೆ ನಡೆಸಿ,ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು, ಅಧಿಕಾರಿ, ಸಿಬ್ಬಂದಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಹೇಳಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ತಾಪಂ ಇಒಗಳು, ತಹಸೀಲ್ದಾರ್‌ರು, ಪಿಡಿಒ, ನರೇಗಾ, ಗ್ರಾಪಂ ಅಧಿಕಾರಿ ಸಿಬ್ಬಂದಿ ಅವಶ್ಯಕ ಪೂರ್ವಸಿದ್ದತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ಹಾದು ಹೋಗುವಾಗ ವಾಹನ ದಟ್ಟಣೆ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನ ವಹಿಸಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡು ಮಾನವ ಸರಪಳಿಯ ಪ್ರಾರಂಭ ಮತ್ತು ಅಂತ್ಯ ಸ್ಥಳ ಗುರುತಿಸಬೇಕು ಎಂದು ಸೂಚಿಸಿದರು.ಪ್ರತಿ ಕಿ.ಮೀ. ಅನ್ನು ಬಣ್ಣ ಹಚ್ಚಿ ಗುರುತು ಮಾಡಿಕೊಂಡು ಪ್ರತಿ ೧ ಕಿ.ಮೀಗೆ ಒಬ್ಬರಂತೆ ನೋಡಲ್ ಅಧಿಕಾರಿ ಪೂರ್ವಯೋಜನೆ ತಯಾರಿಸಿಕೊಳ್ಳಬೇಕು. ಗ್ರಾಮ ಮತ್ತು ತಾಲೂಕುಗಳಲ್ಲಿರುವ ವಿವಿಧ ಸಂಘಟನೆಗಳ ಮತ್ತು ಸ್ವ ಸಹಾಯ ಗುಂಪುಗಳ ಜೊತೆ ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರು, ಪದಾಧಿಕಾರಿಗಳು ಮತ್ತು ಸಾರ್ವಜನಿಕರನ್ನು ಸೇರಿಸಬೇಕು ಮತ್ತು ಮಾನವ ಸರಪಳಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನ ನೀಡಿ, ಮಕ್ಕಳನ್ನು ಕರೆ ತರುವ ಮತ್ತು ಕಳಿಸುವ ಕೆಲಸ ಸರಿಯಾಗಿ ಆಗಬೇಕು ಎಂದು ತಿಳಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಮಾತನಾಡಿ, ಪೊಲೀಸ್ ಇಲಾಖೆಯ ಪಿಎಸ್‌ಐ, ಡಿವೈಎಸ್ಪಿ ಮತ್ತು ಸಂಚಾರಿ ಪೊಲೀಸರು ಕಾರ್ಯನಿವಹಿಸಿ ಮಾನವ ಸರಪಳಿಗೆ ಸಂಪೂರ್ಣ ಬಂದೋಬಸ್ತ್ ಒದಗಿಸಲಾಗುವುದು ಎಂದು ಹೇಳಿದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ, ಮಾನವ ಸರಪಳಿಯ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಕೊಂಡಿಕೊಳ್ಳಲು ತಿಳಿಸಿದರು. ಎಡಿಸಿ ಮಂಗಳ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಕೆಜಿಎಫ್ ಎಸ್‌ಪಿ ಶಾಂತಕುಮಾರ್, ಡಿಡಿಪಿಐ ಉಪನಿರ್ದೇಶಕ ಕೃಷ್ಣಮೂರ್ತಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ