ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ ಅವರ ಜನ್ಮದಿನದ ಸ್ಮರಣಾರ್ಥ ಆ.26 ರಂದು ಆಚರಿಸಲಾಗುವ ಈದ್-ಮಿಲಾದ್ ಹಬ್ಬವನ್ನು ಜಿಲ್ಲಾದ್ಯಂತ ಶಾಂತಿಯುವ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆಬಾಗಲಕೋಟೆ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ ಅವರ ಜನ್ಮದಿನದ ಸ್ಮರಣಾರ್ಥ ಆ.26 ರಂದು ಆಚರಿಸಲಾಗುವ ಈದ್-ಮಿಲಾದ್ ಹಬ್ಬವನ್ನು ಜಿಲ್ಲಾದ್ಯಂತ ಶಾಂತಿಯುವ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಕರೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಭಭವನದಲ್ಲಿ ಶನಿವಾರ ಈದ್-ಮಿಲಾದ್ ಹಬ್ಬದ ನಿಮಿತ್ತ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈದ್-ಮಿಲಾದ್ ಹಬ್ಬವು ಪ್ರೀತಿ, ಸಹೋದರತ್ವ, ಶಾಂತಿ ಹಾಗೂ ಸೌಹಾರ್ದತೆಯ ಸಂದೇಶ ಸಾರುವ ಹಬ್ಬವಾಗಿದ್ದು, ಎಲ್ಲ ಸಮುದಾಯಗಳ ಜನರು ಪರಸ್ಪರ ಗೌರವ ಹಾಗೂ ಸಹಬಾಳ್ವೆಯೊಂದಿಗೆ ಹಬ್ಬ ಆಚರಿಸಬೇಕು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಈದ್-ಮಿಲಾದ್ ಅಂಗವಾಗಿ ನಡೆಯುವ ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ಚಟುವಟಿಕೆಗಳಿಗೆ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್, ಸಂಚಾರ ವ್ಯವಸ್ಥೆ ಮಾಡಲಾಗುತ್ತದೆ. ಪೊಲೀಸ್ ಇಲಾಖೆ ತಮ್ಮ ಜೊತೆಯಲ್ಲಿ ಇದ್ದು, ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಯಾವುದೇ ರೀತಿಯ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಬರದ ರೀತಿಯಲ್ಲಿ ಹಬ್ಬ ಆಚರಣೆ ಮಾಡಬೇಕು. ಜಿಲ್ಲೆಯ ಎಲ್ಲ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆಗಳನ್ನು ಸಹ ನಡೆಸಲಾಗುತ್ತಿದೆ ಎಂದು ತಿಳಿಸಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಮಾತನಾಡಿ, ಶಾಂತಿಯುತವಾಗಿ ಈದ್-ಮಿಲಾದ ಹಬ್ಬ ಆಚರಣೆಗೆ ಜಿಲ್ಲಾಡಳಿತ ಸಭೆ ಕರೆದ ಹಾಗೆ ತಮ್ಮ ತಮ್ಮ ಹಂತದಲ್ಲಿ ಸಭೆಗಳನ್ನು ಸಹ ನಡೆಸಲು ತಿಳಿಸಿದ ಅವರು, ಗ್ರಾಮೀಣ ಭಾಗದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಕ್ರಮವಹಿಸಲಾಗುವುದು ಎಂದರು.ಸಮುದಾಯದ ಮುಖಂಡ ಶಿಕಂದರ ಅಥಣಿ ಮಾತನಾಡಿ, ಬಾಗಲಕೋಟೆ ನಗರದಲ್ಲಿ ಆಗಸ್ಟ್ 25 ರಿಂದ 27 ವರೆಗೆ ಮೂರು ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ದಿನ ಅಂಜುಮನ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಪುರಾಣ ಪಠ, ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಎರಡನೇ ದಿನ ಹಳೆಯ ಬಾಗಲಕೋಟೆಯಲ್ಲಿ ಹಾಗೂ ಮೂರನೇ ದಿನ ನವನಗರದ ವ್ಯಾಪ್ತಿಯಲ್ಲಿ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ.ಆರ್, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಡಿವೈಎಸ್ಪಿ ಗಜಾನನ ಸುತಾರ ಸೇರಿದಂತೆ ಸಮುದಾಯದ ಮುಖಂಡರಾದ ಎ.ಎ.ದಾಂಡಿಯಾ, ಅಬ್ದುಲ್ ರಜಾಕ್ ಬೇಪಾರಿ, ಅಕ್ಬರಸಾಬ ಮಿರಜಕರ, ಅಮೀನಸಾಬ ರಕ್ಕಸಗಿ, ಮೆಹಬೂಬ ಮುದ್ದೇಬಿಹಾಳ, ಅಬ್ದುಲ್‌ಗಫರ್ ಕೊರ್ತಿ, ಮಹಾಬಳೇಶ ಗುಡಗುಂಟಿ, ರಾಮಕಿಶನ್ ಮುಂಡಾಸ, ಉಮೇಶ ಹಂಚಿನಾಳ, ರಮೇಶ ಬಂಡಿವಡ್ಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.
----ಕೋಟ್ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನಚ್ಚರಿಗೆ ಕ್ರಮಕೈಗೊಳ್ಳುವುದು ಹಾಗೂ ಎಲ್ಲ ಸಮುದಾಯಗಳ ನಡುವೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ಹಬ್ಬದ ಸಂದರ್ಭದಲ್ಲಿ ಡಿಜೆಗೆ ಅವಕಾಶ ಕಲ್ಪಿಸದಂತೆ ಸಮುದಾಯದ ಮುಖಂಡರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿರುವುದು ಸ್ವಾಗತಾರ್ಹವಾಗಿದ್ದು, ಇದು ಎಲ್ಲರಿಗೂ ಮಾದರಿಯಾಗಬೇಕು.ಸಂಗಪ್ಪ, ಜಿಲ್ಲಾಧಿಕಾರಿ
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.