ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬವದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡುವುದು ಕೇವಲ ಪೊಲೀಸ್ ಇಲಾಖೆಯಷ್ಟೇ ಎಲ್ಲ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲ ಸಮುದಾಯದವರು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡ ಬಾರದು, ಪರಸ್ಪರ ಸ್ನೇಹ,ಸಹಕಾರ, ಸೌಹಾರ್ದತೆಯಡಿ ಶಾಂತಿಯುತವಾಗಿ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸಬೇಕು ಎಂದರು.
ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಹಾಗೂ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳಬಾರದು ಎಂದು ತಿಳಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ ಮಾತನಾಡಿದರು. ಸಭೆಯಲ್ಲಿ ಡಿಎಸ್ಪಿ ಶಾಂತವೀರ, ವಿವಿಧ ಸಮಾಜದ ಹಿರಿಯ-ಕಿರಿಯ ಮುಖಂಡರು, ಗಜಾನನ ಮಂಡಳಿಯ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.ರಾಸಾಯನಿಕ ಬಣ್ಣಲೇಪಿತ ಗಣಪನ ವಿಗ್ರಹಗಳ ತಯಾರಿಕೆ ನಿಷಿದ್ಧ: ಡಿಸಿ: ಸರ್ಕಾರದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣಪತಿ ವಿಗ್ರಹಗಳ ತಯಾರಿಕೆ, ಸಂಗ್ರಹ, ಮಾರಾಟ ನಿಷೇಧಿಸಲಾಗಿದ್ದು, ಮಣ್ಣು ಅಥವಾ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾತ್ರ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ (ಪಿ.ಓ.ಪಿ)/ ಲೋಹ ಮಿಶ್ರಿತ ಬಣ್ಣ ಲೇಪಿತದಂತಹ ಮೂರ್ತಿಗಳನ್ನು ಬಳಸದೇ ನೈಸರ್ಗಿಕ ಬಣ್ಣಗಳಿಂದ ತಯಾರಿ ಸಿರುವ ಮಣ್ಣಿನ ಚಿಕ್ಕ ಮೂರ್ತಿಗಳನ್ನು ಖರೀದಿಸಿ ಪೂಜಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಸ್ಥಾಪನೆಗೆ ಸಂಬಂಧಪಟ್ಟಂತೆ, ಗಣೇಶ ಮಂಡಳಿಯವರು ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ಅಗತ್ಯ ಪರವಾನಿಗೆ ಪಡೆಯುವ ಮೂಲಕ ಷರತ್ತು ಮತ್ತು ನಿಬಂಧನೆಗಳನ್ನು ಪಾಲನೆ ಮಾಡಲು ತಿಳಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ರಹಿತ ವಸ್ತುಗಳ ಬದಲಿಗೆ ಹೂವು ಪತ್ರೆಗಳಿಂದ ಅಲಂಕರಿಸಿ ಮಣ್ಣಿನ ಗಣೇಶ ಮೂರ್ತಿಯನ್ನು ಪೂಜಿಸುವುದು.
ಸಾರ್ವಜನಿಕರು ಮನೆಗಳಲ್ಲಿ ಸ್ಥಾಪಿಸಲ್ಪಟ್ಟ ಮೂರ್ತಿಗಳ ವಿಸರ್ಜನೆಯ ಸಮಯದಲ್ಲಿ ಒಂದು ಬಕೆಟ್ ನೀರಿನಲ್ಲಿ ವಿಸರ್ಜಿಸುವ ಪದ್ಧತಿಯನ್ನು ರೂಢಿ ಮಾಡಿಕೊಳ್ಳು ವುದು ಮತ್ತು ವಿಸರ್ಜನೆ ಮಾಡಲಾದ ಮಣ್ಣನ್ನು ಮನೆಗಳ ಆವರಣದಲ್ಲಿರುವ ಗಿಡಗಳ ಬದುಗಳಿಗೆ ಹಾಕುವುದು. ಹಬ್ಬದ ಸಮಯದಲ್ಲಿ ಶಬ್ಧ ಮತ್ತು ವಾಯು ಮಾಲಿನ್ಯ ತಡೆಗೆ ಹೆಚ್ಚಿನ ಧ್ವನಿ ಹೊರಸೂಸುವ ಧ್ವನಿವರ್ಧಕ ಮತ್ತು ಪಟಾಕಿಗಳನ್ನು ಉಪಯೋಗಿಸಬೇಡಿ (ರಾತ್ರಿ ಸಮಯ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ/ಪಟಾಕಿಗಳ ಬಳಕೆಯನ್ನು ನಿಷೇಧಿಸಲಾಗಿದೆ).