ಕನ್ನಡಪ್ರಭ ವಾರ್ತೆ ಕಲಬುರಗಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರಂದು ಹೋಳಿ ಹಬ್ಬ ಆಚರಣೆಯ ಅಂಗವಾಗಿ ಕರೆಯಲಾದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಹೋಳಿ ಹಬ್ಬ ಆಚರಣೆಯ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಎಚ್ಚರ ವಹಿಸಲು ತಿಳಿಸಿದರು.
ಚುನಾವಣೆ ನೀತಿ ಸಂಹಿತೆ, ಎಸ್‌ಎಸ್ಎಲ್‌ಸಿ ಪರೀಕ್ಷೆ ಹಾಗೂ ರಂಜಾನ್ ಹಬ್ಬ ಒಂದೇ ಸಮಯದಲ್ಲಿ ಬಂದಿರುವುದರಿಂದ ಪರಸ್ಪರ ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಶಾಂತಿ ಸಮಿತಿ ಸದಸ್ಯರು ಸಭೆಯಲ್ಲಿ ಹೇಳಿದರು.ಜೆಸ್ಕಾಂನವರು ಅಂದು 2 ದಿನ ವಿದ್ಯುತ್ ತೆಗೆಯಕೂಡದು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಾನಗರ ಪಾಲಿಕೆಯವರು ಹಬ್ಬದ ಎರಡು ದಿನ ನೀರು ಸರಬರಾಜು ಮಾಡಬೇಕು. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನಿಮ್ಮ ನಿಮ್ಮ ಬಡಾವಣೆಯಲ್ಲಿ ಯಾವುದಾದರು ಇಂತಹ ಘಟನೆ ನಡೆದರೆ ಪೊಲೀಸ್ ಸಹಾಯ ವಾಣಿ ಸಂಖ್ಯೆ 112ಕ್ಕೆ ಕರೆ ಮಾಡಲು ಸೂಚಿಸಿದರು. ಎಲೆಲ್ಲಿ ಕಾಮದಹನ/ಹೋಳಿ ಹಬ್ಬ ಆಚರಣೆ ಮಾಡಲಾಗಿದೆ. ಅಲ್ಲಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.
ಡಿಸಿಪಿ ಕನಿಕಾ ಸಿಕ್ರಿವಾಲ್, ಸೇರಿದಂತೆ ಪೋಲಿಸ್ ಇನ್ಸ್‌ಪೆಕ್ಟರ್‌ಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಶಾಂತಿ ಸಮಿತಿ ಸದಸ್ಯರು ನಾಗರಿಕರು, ಸಮಾಜದ ಮುಖಂಡರು ಹಿರಿಯ ನಾಗರಿಕರು ಹಲವಾರು ಸೂಕ್ತ ಸಲಹೆಗಳನ್ನು ನೀಡಿದರು.