ಸ್ವಾತಂತ್ರ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ:ಸಿ.ಎನ್.ಶ್ರೀಧರ್

KannadaprabhaNewsNetwork |  
Published : Jul 31, 2025, 12:46 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳಿಗೆ ಸೂಕ್ತ ದೀಪಾಲಂಕಾರವಾಗಬೇಕು

ಗದಗ: ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿಂದಿನ ದಿನ ಆ.14 ಹಾಗೂ ಸ್ವಾತಂತ್ರ್ಯೋತ್ಸವದ ದಿನ ಆ. 15 ರಂದು ಎರಡು ದಿವಸಗಳ ಕಾಲ ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಆಗಬೇಕು. ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳಿಗೆ ಸೂಕ್ತ ದೀಪಾಲಂಕಾರವಾಗಬೇಕು ಎಂದರು.

ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಆ. 15 ರಂದು ಬೆಳಗ್ಗೆ 8ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ನಂತರ ಬೆಳಗ್ಗೆ 9 ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಅಂದು ಕಾರ್ಯಕ್ರಮ ಪ್ರಾರಂಭವಾಗುವದಕ್ಕಿಂತ ಮುಂಚೆಯೇ ಎಲ್ಲ ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಹಾಗೂ ಪ್ರಮುಖ ವೃತ್ತಗಳ ಸ್ವಚ್ಛತೆಗೆ ನಗರಸಭೆ ಪೌರಾಯುಕ್ತರು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಗಣ್ಯ ವ್ಯಕ್ತಿಗಳಿಗೆ ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೂ ಸಹ ಸೂಕ್ತ ಆಸನದ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ನಗರಸಭೆ ಪೌರಾಯುಕ್ತರು ನಿಗಾ ವಹಿಸಬೇಕು. ಕಾರ್ಯಕ್ರಮದ ದಿನ ತುರ್ತು ಸೇವೆಗಾಗಿ ಆ್ಯಂಬುಲೆನ್ಸ್‌ ವ್ಯವಸ್ಥೆಗೆ ಕ್ರಮ ವಹಿಸಬೇಕು. ಒಟ್ಟಾರೆ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಶ್ರದ್ಧೆ ಹಾಗೂ ಆಸಕ್ತಿಯಿಂದ ಆಚರಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಪಂ ಸಿಇಒ ಭರತ್.ಎಸ್ ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಯಾವುದೇ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳ ಹಾಜರಾತಿ ಕಡ್ಡಾಯವಾಗಿದೆ ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ. ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಕ್ಕೆ ಆಯಾ ಇಲಾಖಾಧಿಕಾರಿಗಳು ಕ್ರಮ ವಹಿಸಬೇಕು. ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯ ಅಚ್ಚಕಟ್ಟಾಗಿ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಶಿಷ್ಟಾಚಾರದನುಸಾರವಾಗಿ ಆಮಂತ್ರಣ ಪತ್ರಿಕೆ ಮುದ್ರಣ, ಅಲ್ಪೋಪಹಾರದ ವ್ಯವಸ್ಥೆ, ಪರೇಡ್ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಧ್ವನಿವರ್ಧಕ, ವಿದ್ಯುತ್ ಸರಬರಾಜು ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.

ಈ ವೇಳೆ ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ವಿದ್ಯಾನಂದ ನಾಯಕ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಸನಾಯಕ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ.ಬಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ವಾರ್ತಾ ಮತ್ತು ಸಾ.ಸಂ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಬಸವರಾಜ ಮಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ