ರಾಹುಲ್ ಗಾಂಧಿ ಜನ್ಮದಿನ ಮೂರ್ಖರ ದಿನವಾಗಿ ಆಚರಿಸಿ: ಬಿಜೆಪಿ

KannadaprabhaNewsNetwork |  
Published : Sep 20, 2025, 01:00 AM IST
ಕ್ಯಾಪ್ಷನ19ಕೆಡಿವಿಜಿ45 ದಾವಣಗೆರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಆರ್.ಎಲ್.ಶಿವಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಟ್ಟಿದ ಜೂನ್ 19ನೇ ತಾರೀಖನ್ನು ರಾಷ್ಟ್ರೀಯ ಮೂರ್ಖರ ದಿನವನ್ನಾಗಿ ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್.ಎಲ್.ಶಿವಪ್ರಕಾಶ್ ಒತ್ತಾಯಿಸಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಟ್ಟಿದ ಜೂನ್ 19ನೇ ತಾರೀಖನ್ನು ರಾಷ್ಟ್ರೀಯ ಮೂರ್ಖರ ದಿನವನ್ನಾಗಿ ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್.ಎಲ್.ಶಿವಪ್ರಕಾಶ್ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಯುವ ಘಟಕ ನರೇಂದ್ರ ಮೋದಿ ಅವರ 75ನೇ ಜನ್ಮದಿನವನ್ನು ನಿರುದ್ಯೋಗ ದಿನವಾಗಿ ಆಚರಿಸುವುದಕ್ಕಿಂತ, ರಾಹುಲ್ ಗಾಂಧಿ ಹುಟ್ಟಿದ ದಿನವನ್ನು ಮೂರ್ಖರ ದಿನವನ್ನಾಗಿ ಆಚರಿಸಲಿ ಆ ಮೂಲಕ ರಾಹುಲ್ ಗಾಂಧಿ ಮತ್ತು ಅವರ ಬುದ್ಧಿವಂತಿಕೆಗೆ ಸೂಕ್ತ ಗೌರವ ಸೂಚಿಸಬೇಕು ಎಂದರು.

ಸತ್ಯ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಬೆಲೆ ಕೊಡುವುದಾದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕೆಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಲೀದ್ ಅಹಮದ್ ಹೇಳಿಕೆ ಗಮನಿಸಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಭಾಸವಾಗುತ್ತದೆ ಎಂದು ಹೇಳಿದರು.

ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಬಗ್ಗೆ ಮಾತನಾಡುವ ಯಾವ ನೈತಿಕತೆಯನ್ನೂ ಕಾಂಗ್ರೆಸ್ ಉಳಿಸಿಕೊಂಡಿಲ್ಲ. 2004 ರಿಂದ 2014ರವರೆಗೆ ಕಾಂಗ್ರೆಸ್ ಸರ್ಕಾರ ನಡೆಸಿದ ಭ್ರಷ್ಟಾಚಾರದ ಸರಮಾಲೆಯೇ ಅವರ ನೈತಿಕತೆಗೆ ಹಿಡಿದ ಕೈಗನ್ನಡಿ. ಕಲ್ಲಿದ್ದಲು ಹಗರಣ, 2ಜಿ ಸ್ಪೆಕ್ಟ್ರಂ ಹಗರಣ, ಹೆಲಿಕಾಪ್ಟರ್ ಹಗರಣ, ಕಾಮನ್ ವೆಲ್ತ್ ಹಗರಣ, ಆದರ್ಶ ಅಪಾರ್ಟ್ಮೆಂಟ್ ಹಗರಣ ಹೀಗೆ ಹಲವಾರು ಹಗರಣ ನಡೆಸಿ ಭಾರತದ ಆರ್ಥಿಕತೆ ಅಧೋಗತಿಗೆ ತಳ್ಳಿದ್ದು ಕಾಂಗ್ರೆಸ್ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಲ್.ಧನುಷ್, ಜಿ.ಯಲ್ಲೇಶ್, ಟಿ.ಎನ್.ಕಿರಣ್ ಇತರರು ಇದ್ದರು.

- - -

-19ಕೆಡಿವಿಜಿ45:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ