ಹಣ್ಣು ಹಂಪಲು ವಿತರಿಸಿ ರವೀಂದ್ರ ಜಿಂಡ್ರಾಳಿ ಜನ್ಮ ದಿನಾಚರಣೆ

KannadaprabhaNewsNetwork |  
Published : Jul 22, 2025, 01:15 AM IST
ಯಮಕನಮರಡಿ | Kannada Prabha

ಸಾರಾಂಶ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮಿನ ದೂಧನಾನಾ ವಿಕಾಸ ಶಿಕ್ಷಣ ಸಂಸ್ಥೆಯ ಬುದ್ಧಿಮಾಂದ್ಯ ವಿಶೇಷ ವಸತಿಯುತ ಶಾಲೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಸ್ವಧಾರ ಆಶ್ರಯ ಗೃಹದಲ್ಲಿ ಲಕ್ಷ್ಮೀ ದೇವಿ ಅರ್ಬನ್ ಸೌಹಾರ್ದ ಸಹಕಾರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ಕರ್ನಾಟಕ ಪತ್ರಕರ್ತರ ಸಂಘದ ಹುಕ್ಕೇರಿ ತಾಲೂಕು ಘಟಕದ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ಯುವ ಧುರೀಣ ರವೀಂದ್ರ ಜಿಂಡ್ರಾಳಿ ಅವರ 51ನೇ ಹುಟ್ಟುಹಬ್ಬದ ಅಂಗವಾಗಿ ಹಣ್ಣು ಹಂಪಲ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಯಮಕನಮರಡಿ

ರವೀಂದ್ರ ಜಿಂಡ್ರಾಳಿ ಆಪ್ತ ಸ್ನೇಹಿತ ಸಂತೋಷ ಅತ್ತಿಮರದ ಮಾತನಾಡಿ, ಸದಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗುತ್ತಿರುವ ರವಿ ಜಿಂಡ್ರಾಳಿಯಂತಹ ಸ್ನೇಹಿತರನ್ನು ಪಡೆದ ನಾವೆಲ್ಲರೂ ಪುಣ್ಯವಂತರು ಎಂದು ಶ್ಲಾಘಿಸಿದರು.ರವೀಂದ್ರ ಜಿಂಡ್ರಾಳಿಯವರ ಸುಪುತ್ರ ಸಮರ್ಥ ಜಿಂಡ್ರಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾಜಿಕ ಕ್ಷೇತ್ರದಲ್ಲಿ ತಂದೆಯವರು ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಮುಂದಿನ ದಿನಗಳಲ್ಲಿ ಮುಂದುವರೆಸಲಾಗುವುದು ಎಂದು ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ಮಹಿಳಾ ಘಟಕದ ಕಾರ್ಯದರ್ಶಿ ಜಯಶ್ರೀ ಮತ್ತಿಕೊಪ್ಪ, ಉಪನ್ಯಾಸಕ ಎ.ವೈ.ಸೋನ್ಯಾಗೋಳ ಮಾತನಾಡಿದರು. ಈ ಸಂದರ್ಭದಲ್ಲಿ ಆನಂದ ಮಗದುಮ್ಮ, ಹುಕ್ಕೇರಿ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ದಸ್ತಗೀರ ಬಸ್ಸಾಪೂರೆ, ಕಯ್ಯಮ ಖಾಜಿ, ಸಾವಿತ್ರಿ ಕರಿಗಾರ, ಬುದ್ಧಿ ಮಾಂದ್ಯ ವಿಶೇಷ ಶಾಲೆಯ ಮುಖ್ಯ ಶಿಕ್ಷಕ ಬಿ.ಬಿ.ಸಂಕನ್ನವರ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನದ ಸುಗಂಧಾ ಮೋಕಾಶಿ, ಮಂದಾಕಿನಿ ಹಟ್ಟಿ, ದ್ರಾಕ್ಷಾಯಣಿ ಮಠಪತಿ, ಫಲಾನುಭಾವಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು