ಕನ್ನಡಪ್ರಭ ವಾರ್ತೆ ಕೊಪ್ಪಳ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣರಾಜ್ಯೋತ್ಸವ ದಿನಾಚರಣೆಯ ನಿಮಿತ್ತ ಜ.26ರ ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟು ಹಾಗೂ ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ಪರಸ್ಪರ ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿ ಕಾರ್ಯಕ್ರಮ, ಪೊಲೀಸ್, ಅರಣ್ಯ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದ ತಂಡಗಳಿಂದ ಕವಾಯತು ನಡೆಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಗಳ ಅಲಂಕಾರಕ್ಕೆ ಕೊಪ್ಪಳ ನಗರಸಭೆ ವತಿಯಿಂದ ವ್ಯವಸ್ಥೆ ಮಾಡಬೇಕು. ವಿವಿಧ ಶಾಲಾ ಕಾಲೇಜುಗಳ ಮಕ್ಕಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಕರೆತರಲು ಕೆಎಸ್‌ಆರ್‌ಟಿಸಿ ಯಿಂದ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಗಣರಾಜ್ಯೋತ್ಸವ ಕಾರ್ಯಕ್ರಮ ಅಚ್ಚುಕಟ್ಟು ನಡೆಯಲು ರಚಿಸಲಾದ ವಿವಿಧ ಸಮಿತಿಗಳು ತಮಗೆ ಹಂಚಿಕೆ ಮಾಡಲಾದ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರೇಷ್ಮಾ ಹಾನಗಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಶ್ರಿಶೈಲ ಬಿರಾದಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ತಹಸೀಲ್ದಾರ ವಿಠ್ಠಲ್ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.