ಕನ್ನಡಪ್ರಭ ವಾರ್ತೆ ರಾಮದುರ್ಗ
ಮಿನಿ ವಿಧಾನಸೌಧದಲ್ಲಿ ನಡೆದ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷ ವಹಿಸಿ ಮಾತನಾಡಿದ ಅವರು, ಪೂರ್ವಭಾವಿ ಸಭೆಗೆ ಕೆಲವು ಅಧಿಕಾರಿಗಳು ಸಭೆಗೆ ಆಗಮಿಸದೆ ತಮ್ಮ ಸಹಾಯಕರನ್ನು ಕಳಿಸಿದ್ದು, ಇದು ಸರಿಯಲ್ಲ ಜ.26ರಂದು ಎಲ್ಲ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಬರದಿದ್ದರೆ ಸೂಕ್ತಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ಬೆಳಗ್ಗೆ 8 ಗಂಟೆಗೆ ತಮ್ಮತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ಮುಗಿಸಿಕೊಂಡು ಮಿನಿವಿಧಾನಸೌಧ, ಬಿ.ಎನ್.ಮುನವಳ್ಳಿಯವರು ಮೂರ್ತಿ ಹತ್ತಿರ ನಂತರ ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಸೂಚಿಸಿದರು.ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರ ಲಾಂಛನ ಕುರಿತು ರಂಗೋಲಿ ಸ್ಪರ್ಧೆ ಏರ್ಪಡಿಸಲು, ಮುಖ್ಯವೇದಿಕೆಯಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಿ, ಗೌರವಿಸಲು ನಿರ್ಧರಿಸಲಾಯಿತು.
ಪೂರ್ವಭಾವಿ ಸಭೆಯಲ್ಲಿ ಗ್ರೇಡ್-2 ತಹಸೀಲ್ದಾರ್ ಸಂಜಯ ಖಾತೆದಾರ, ಬಿಇಒ ಆರ್.ಟಿ.ಬಳಿಗಾರ, ಪಿಎಸೈ ಸುನೀಲ ನಾಯಕ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಸಂಗೀತಾ ಕುರೇರ, ಸಹಾಯಕ ಕೃಷಿ ನಿರ್ದೇಶಕ ಎಸ್.ಎಫ್.ಬೆಳವಟಗಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳಿದ್ದರು.